ಉಡುಪಿ: ಮೂವರು ಪೊಲೀಸ್‌ರಿಗೆ ಕೊರೋನ ಸೋಂಕು

Update: 2020-05-24 10:08 GMT
ಸಾಂದರ್ಭಿಕ ಚಿತ್ರ

ಉಡುಪಿ, ಮೇ 24: ಉಡುಪಿ ಜಿಲ್ಲೆಯ ಮೂವರು ಪೊಲೀಸ್ ಸಿಬ್ಬಂದಿಗಳಲ್ಲಿ ಕೊರೋನ ವೈರಸ್ ಸೋಂಕು ಪತ್ತೆಯಾಗಿದೆ. ಕಾರ್ಕಳ ಗ್ರಾಮಾಂತರ, ಅಜೆಕಾರು ಹಾಗೂ ಬ್ರಹ್ಮಾವರ ಪೊಲೀಸ್ ಠಾಣೆಗಳ ಪೊಲೀಸ್ ಸಿಬ್ಬಂದಿಗಳು ಕೊರೋನಕ್ಕೆ ಪಾಸಿಟಿವ್ ಆಗಿದ್ದಾರೆ.

ಇದೀಗ ಮೂರು ಠಾಣೆಗಳ ಎಲ್ಲಾ ಅಧಿಕಾರಿಗಳು, ಪೊಲೀಸರು ಹಾಗೂ ಇತರ ಸಿಬ್ಬಂದಿಗಳನ್ನು ಕ್ವಾರಂಟೈನ್‌ನಲ್ಲಿರಿಸಲಾಗಿದೆ. ಸದ್ಯಕ್ಕೆ ಮೂರು ಠಾಣೆಗಳ ಕಟ್ಟಡಗಳನ್ನು ಸೀಲ್‌ಡೌನ್ ಮಾಡಲಾಗಿದೆ. ಬ್ರಹ್ಮಾವರ, ಅಜೆಕಾರು ಪೊಲೀಸ್ ಠಾಣೆಗಳಲ್ಲದೇ, ಕಾರ್ಕಳ ಗ್ರಾಮಾಂತರ ಠಾಣೆ ಇರುವ ಕಟ್ಟಡದಲ್ಲೇ ಕಾರ್ಕಳ ನಗರ ಹಾಗೂ ವೃತ್ತ ನಿರೀಕ್ಷಕರ ಕಚೇರಿಗಳೂ ಇದ್ದು ಅವುಗಳನ್ನು ಸಹ ಮುಚ್ಚಲಾಗಿದೆ.

ಈ ಕಟ್ಟಡಗಳಿಗೆ ಸಂಪೂರ್ಣ ಸ್ಯಾನಿಟೈಸರ್ ಸಿಂಪಡಣೆ ಮಾಡಿದ ಬಳಿಕ ಎರಡು ದಿನ ಬಿಟ್ಟು ಈ ಠಾಣೆಗಳು ಕಾರ್ಯಾರಂಭ ಮಾಡಲಿವೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ತಿಳಿಸಿದ್ದಾರೆ.
ಕೊರೋನ ಪಾಸಿಟಿವ್ ಬಂದ ಮೂವರು ಸಿಬ್ಬಂದಿಗಳ ಸಂಪರ್ಕಿತರ ಪಟ್ಟಿಯನ್ನು ತಯಾರಿಸುತಿದ್ದೇವೆ. ಅವರ ಕೊರೋನ ಸಂಪರ್ಕದ ಬಗ್ಗೆ ಮಾಹಿತಿಗಳನ್ನೂ ಕಲೆ ಹಾಕಲಾಗುತ್ತಿದೆ ಎಂದು ಅವರು ತಿಳಿಸಿದರು. ಮೂವರನ್ನು ಈಗ ಉಡುಪಿಯ ಡಾ.ಟಿಎಂಎ ಪೈ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News