ಹೊರ ರಾಜ್ಯದಿಂದ ಬಂದವರಿಂದಲೇ ಸೋಂಕು ಹೆಚ್ಚಾಗಿದೆ: ಸಚಿವ ಸೋಮಶೇಖರ್
Update: 2020-05-24 15:34 IST
ಬೆಂಗಳೂರು, ಮೇ.24: ಕೋವಿಡ್-19 ಸಂಬಂಧ ಹೊರ ರಾಜ್ಯಗಳಿಂದ ಬಂದ ಪ್ರಯಾಣಿಕರಿಂದಲೇ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ ಎಂದು ಸಚಿವ ಸೋಮಶೇಖರ್ ಹೇಳಿದರು.
ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ಹಾಗೂ ತಮಿಳುನಾಡಿನಿಂದ ಬಂದ ವಲಸೆ ಕಾರ್ಮಿಕರಿಂದ ಹೆಚ್ಚು ಕೊರೋನ ಪ್ರಕರಣ ಕಂಡುಬರುತ್ತಿದ್ದು, ಎಲ್ಲರನ್ನೂ ಕಡ್ಡಾಯವಾಗಿ ತಪಾಸಣೆ ಮಾಡಲಾಗುತ್ತಿದೆ ಎಂದರು.
ಲಾಕ್‌ಡೌನ್ ಪ್ರಕ್ರಿಯೆಗೆ ಸಾರ್ವಜನಿಕರು ಉತ್ತಮ ಸಹಕಾರ ನೀಡಿರುವ ಕಾರಣ ಕೆಲವೊಂದು ಸೇವೆಗಳಿಗೆ ವಿನಾಯಿತಿ ನೀಡಲಾಗಿದೆ ಎಂದು ಅವರು ತಿಳಿಸಿದರು.