ಬೆಂಗಳೂರಿನಿಂದ ಉತ್ತರ ಪ್ರದೇಶಕ್ಕೆ ತೆರಳಿದ್ದ ಗರ್ಭಿಣಿಗೆ ರೈಲಿನಲ್ಲೇ ಹೆರಿಗೆ

Update: 2020-05-24 13:34 GMT

ಬೆಂಗಳೂರು, ಮೇ.25: ಲಾಕ್ ಡೌನ್ ಹಿನ್ನೆಲೆ ಬೆಂಗಳೂರಿನಿಂದ ಉತ್ತರ ಪ್ರದೇಶಕ್ಕೆ ತೆರಳಿದ್ದ ಗರ್ಭಿಣಿ ರೈಲಿನಲ್ಲೇ ಮಗುವಿಗೆ ಜನ್ಮ ನೀಡಿದ್ದು, ತಾಯಿ-ಮಗು ಸುರಕ್ಷಿತರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂಗೀತಾ(29) ಎಂಬವರು ಇಲ್ಲಿನ ವೈಟ್‍ಫೀಲ್ಡ್ ವ್ಯಾಪ್ತಿಯ ಪ್ರದೇಶಯೊಂದರಲ್ಲಿ ವಾಸವಾಗಿದ್ದು, ಕೂಲಿ ಕೆಲಸ ಮಾಡುತ್ತಿದ್ದರು. ಈಕೆ ಗರ್ಭಿಣಿಯಾಗಿದ್ದರಿಂದ ಊರಿಗೆ ಹೋಗಲು ಪ್ರಯತ್ನಿಸಿದಾಗ ವೈಟ್ ಫೀಲ್ಡ್ ವಿಭಾಗದ ಡಿಸಿಪಿ ಅನುಚೇತ್ ಅವರು, ಸೇವಾ ಸಿಂಧು ಆಪ್ ಮೂಲಕ ಟಿಕ್ ಬುಕ್ ಮಾಡಿ ರೈಲಿನಲ್ಲಿ ಇಬ್ಬರಿಗೆ ಪ್ರತ್ಯೇಕ ಆಸನ ಕಲ್ಪಿಸಿದ್ದಾರೆ.

ಮೇ.21ರಂದು ನಗರದಿಂದ ಉತ್ತರ ಪ್ರದೇಶಕ್ಕೆ ಶ್ರಮಿಕ್ ರೈಲು ಮೂಲಕ ಪ್ರಯಾಣ ಬೆಳೆಸಿದ್ದಾರೆ. ಮಾರ್ಗ ಮಧ್ಯೆ ರೈಲಿನಲ್ಲಿ ಹೆರಿಗೆಯಾಗಿ ಮಗುವಿಗೆ ಜನ್ಮ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News