ರಾಜ್ಯದಲ್ಲಿ ಇಂದು 69 ಮಂದಿಗೆ ಕೊರೋನ ಸೋಂಕು ದೃಢ: ಸಾವಿನ ಸಂಖ್ಯೆ 43ಕ್ಕೆ ಏರಿಕೆ

Update: 2020-05-25 07:59 GMT

ಬೆಂಗಳೂರು, ಮೇ 24: ಕರ್ನಾಟಕದಲ್ಲಿ ಒಂದೇ ದಿನ ಮತ್ತೆ 69 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 2158ಕ್ಕೆ ಏರಿಕೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ 55 ವರ್ಷದ ಮಹಿಳೆಯೊಬ್ಬರು ಮೆ.24 ರಂದು ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 43ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಮದ್ಯಾಹ್ನ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ರವಿವಾರ ಸಂಜೆ 5 ಗಂಟೆಯಿಂದ ಸೋಮವಾರ ಮದ್ಯಾಹ್ನ 12 ಗಂಟೆವರೆಗೆ 69 ಕೋವಿಡ್ ಪ್ರಕರಣಗಳು ಪಾಸಿಟಿವ್ ಬಂದಿರುವುದಾಗಿ ಮಾಹಿತಿ ನೀಡಲಾಗಿದೆ.

ಈ ಪೈಕಿ ಉಡುಪಿಯಲ್ಲಿ 16, ಯಾದಗಿರಿ 15, ಕಲಬುರಗಿ 14, ಬೆಂಗಳೂರು ನಗರ 6, ದಕ್ಷಿಣ ಕನ್ನಡ 3, ಧಾರವಾಡ 3, ಬಳ್ಳಾರಿ 3, ಮಂಡ್ಯ 2, ಕೋಲಾರ 2 ಹಾಗೂ ಬೆಳಗಾವಿ, ಬೀದರ್, ವಿಜಯಪುರ, ರಾಮನಗರ ತುಮಕೂರಿನಲ್ಲಿ ತಲಾ ಒಂದೊಂದು ಪ್ರಕರಣಗಳು ಪಾಸಿಟಿವ್ ಬಂದಿದೆ.

ಒಟ್ಟಾರೆ ರಾಜ್ಯದಲ್ಲಿ 2,158 ಕೊರೋನ ಸೋಂಕಿತರ ಪೈಕಿ 680 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 26 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 43 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 1433 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News