ದ.ಕ. ಜಿಲ್ಲೆಯಲ್ಲಿ ಇಂದು ಮೂವರಿಗೆ ಕೊರೋನ ಪಾಸಿಟಿವ್: 69ಕ್ಕೆ ಏರಿದ ಸೋಂಕಿತರ ಸಂಖ್ಯೆ

Update: 2020-05-25 09:27 GMT

ಮಂಗಳೂರು, ಮೇ,.25: ಜಿಲ್ಲೆಯಲ್ಲಿ ಇಂದು ಕೊರೋನ ವೈರಸ್ ಸೋಂಕಿನ ಮೂರು ಪ್ರಕರಣಗಳು ಪಾಸಿಟಿವ್ ಬಂದಿದೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 69ಕ್ಕೆ ಏರಿಕೆಯಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಮೇ.18 ರಂದು ಮುಂಬೈಯ ದೊಂಬಿವಿಲಿ ಥಾಣೆಯಿಂದ ಆಗಮಿಸಿದ 55 ವರ್ಷದ ವ್ಯಕ್ತಿ ಹಾಗೂ ಮಹಾರಾಷ್ಟ್ರದ ಪುಣೆಯಿಂದ ಆಗಮಿಸಿದ 30 ವರ್ಷ ಪ್ರಾಯದ ಗಂಡಸಿನ ಗಂಟಲು ದ್ರವದ ಮಾದರಿ ಪರೀಕ್ಷಾ ವರದಿ ಸ್ವೀಕೃತವಾಗಿದ್ದು, ಅವರಿಗೆ ಕೊರೋನ ಸೋಂಕು ಇರುವುದು ದೃಢಪಟ್ಟಿದೆ. ಅಲ್ಲದೇ, ಮೇ.20 ರಂದು ಮುಂಬೈಯ ಕುರ್ಲಾದಿಂದ ಆಗಮಿಸಿದ 25 ವರ್ಷದ ಯುವಕನ ಮಾದರಿ ಪರೀಕ್ಷೆಯಲ್ಲಿ ಕೊರೋನ ಪಾಸಿಟಿವ್ ಬಂದಿದೆ ಎಂದು ತಿಳಿಸಿದೆ.

ಅವರಿಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ಕುರಿತು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ದ.ಕ ಜಿಲ್ಲಾಡಳಿತ ಪ್ರಕಟನೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News