ಉಡುಪಿ ಜಿಲ್ಲೆಯಲ್ಲಿ ಕೊರೋನ ಸೋಂಕು: ಏರುತ್ತಿರುವ ಪಾಸಿಟಿವ್ ಸಂಖ್ಯೆ

Update: 2020-05-25 16:40 GMT

ಉಡುಪಿ, ಮೇ 25: ಜಿಲ್ಲೆಯಲ್ಲಿ ನೋವೆಲ್ ಕೊರೋನ ಸೋಂಕಿತರ ಸಂಖ್ಯೆ ಏರುತ್ತಿರುವಂತೆಯೇ ಸೋಮವಾರದ ಕೊನೆಗೆ ಇನ್ನೂ 4540 ಸ್ಯಾಂಪಲ್‌ಗಳ ಪರೀಕ್ಷಾ ವರದಿ ಬರಲು ಬಾಕಿ ಇದೆ. ಇದು ಜಿಲ್ಲೆಯ ಜಿಲ್ಲಾಡಳಿತ, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ವಿಶೇಷವಾಗಿ ಜಿಲ್ಲೆಯ ಜನರಲ್ಲಿ ತೀವ್ರವಾದ ಆತಂಕವನ್ನು ಹುಟ್ಟಿಸಿದೆ.

ಜಿಲ್ಲೆಯಲ್ಲಿ ಈವರೆಗೆ 8206 ಶಂಕಿತರ ಗಂಟಲುದ್ರವ ಮಾದರಿಗಳನ್ನು ಕಳುಹಿಸಿ ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಕಳುಹಿಸಲಾಗಿದೆ. ಇವುಗಳಲ್ಲಿ 3666ರ ಪರೀಕ್ಷಾ ವರದಿ ಬಂದಿವೆ. ಇವುಗಳಲ್ಲಿ 3558 ನೆಗೆಟಿವ್ ಆಗಿದ್ದರೆ, ಇಂದಿನ 32 ಪಾಸಿಟಿವ್ ಸೇರಿದಂತೆ ಒಟ್ಟು 108 ಸ್ಯಾಂಪಲ್‌ಗಳು ಪಾಸಿಟಿೞ್ ಆಗಿ ಬಂದಿವೆ. ಇವುಗಳಲ್ಲಿ 105 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.

ಜಿಲ್ಲಾ ಆರೋಗ್ಯ ಇಲಾಖೆ, ಸೋಮವಾರ ಕೊರೋನ ಸೋಂಕಿನ ಗುಣ ಲಕ್ಷಣಗಳನ್ನು ಹೊಂದಿರುವ ಒಟ್ಟು 1202 ವ್ಯಕ್ತಿಗಳ ಗಂಟಲು ದ್ರವ ಮಾದರಿ ಗಳನ್ನು ಸೋಂಕಿನ ಪರೀಕ್ಷೆಗಾಗಿ ಪ್ರಯೋಗಾಲಯಗಳಿಗೆ ಕಳುಹಿಸಿದೆ ಎಂದು ಡಾ. ಸೂಡ ತಿಳಿಸಿದರು. ಇವುಗಳಲ್ಲಿ 1154 ಸ್ಯಾಂಪಲ್‌ಗಳನ್ನು ಕೊರೋನ ಹಾಟ್‌ಸ್ಪಾಟ್ ಎನಿಸಿರುವ ಹೊರರಾಜ್ಯಗಳಿಂದ ಬಂದವರಿಂದ ಪರೀಕ್ಷೆಗಾಗಿ ಪಡೆಯಲಾಗಿದೆ. ಉಳಿದಂತೆ 41 ಮಂದಿ ಸೋಂಕಿತರ ಸಂಪರ್ಕಕ್ಕೆ ಬಂದವರು, ನಾಲ್ವರು ತೀವ್ರ ಉಸಿರಾಟ ತೊಂದರೆಯವರು, ಮೂವರು ಶೀತಜ್ವರದಿಂದ ಬಳಲುವವರ ಸ್ಯಾಂಪಲ್‌ಗು ಸೇರಿವೆ ಎಂದು ಡಿಎಚ್‌ಓ ತಿಳಿಸಿದರು.

32ಪಾಸಿಟಿವ್, 392 ನೆಗೆಟಿವ್:  ಕೋವಿಡ್ -19 ಸೋಂಕಿನ ಪರೀಕ್ಷೆಗಾಗಿ ಇಂದು ಕಳುಹಿಸಿದ ಶಂಕಿತರ ಗಂಟಲು ದ್ರವದ ಮಾದರಿಗಳಲ್ಲಿ ಸೋಮವಾರ ಮತ್ತೆ 32 ಮಾದರಿಗಳು ಪಾಸಿಟಿವ್ ಫಲಿತಾಂಶವನ್ನು ನೀಡಿದ್ದರೆ, 392 ವರದಿಗಳು ನೆಗೆಟಿವ್ ಆಗಿವೆ ಎಂದರು.

ಶಂಕಿತ ನೋವೆಲ್ ಕೊರೋನ ಸೋಂಕಿನ ಪರೀಕ್ಷೆಗಾಗಿ ಇಂದು 8 ಮಂದಿ ಆಸ್ಪತ್ರೆಗಳ ಐಸೋಲೇಶನ್ ವಾರ್ಡಿಗೆ ದಾಖಲಾಗಿದ್ದಾರೆ. ಇವರಲ್ಲಿ 6 ಮಂದಿ ಪುರುಷ ಹಾಗೂ ಇಬ್ಬರು ಮಹಿಳೆಯರಿದ್ದಾರೆ. ಮೂವರು ಕೊರೋನ ಶಂಕಿತರು, ನಾಲ್ವರು ತೀವ್ರತರದ ಉಸಿರಾಟ ತೊಂದರೆ ಹಾಗೂ ಒಬ್ಬರು ಶೀತಜ್ವರದ ಬಾಧೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿವಿಧ ಆಸ್ಪತ್ರೆಗಳ ಐಸೋಲೇಶನ್ ವಾರ್ಡಿ ನಿಂದ ಇಂದು ಎಂಟು ಮಂದಿ ಬಿಡುಗಡೆಗೊಂಡಿದ್ದು, 114 ಮಂದಿ ಇನ್ನೂ ವೈದ್ಯರ ನಿಗಾದಲ್ಲಿ ಚಿಕಿತ್ಸೆಯಲ್ಲಿದ್ದಾರೆ. ಇದುವರೆಗೆ 595 ಮಂದಿ ಚಿಕಿತ್ಸೆ ಪಡೆದು ಐಸೋಲೇಶನ್ ವಾರ್ಡಿನಿಂದ ಬಿಡುಗಡೆಗೊಂಡಿದ್ದಾರೆ ಎಂದರು.

ಜಿಲ್ಲೆಯಲ್ಲಿ ಕೊರೋನ ಸೋಂಕಿನ ಗುಣಲಕ್ಷಣದ ಏಳು ಮಂದಿ ಇಂದು ಹೊಸದಾಗಿ ನೋಂದಣಿಗೊಂಡಿದ್ದು, ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ ಒಟ್ಟು 4859 ಮಂದಿಯನ್ನು ಕೊರೋನ ತಪಾಸಣೆಗಾಗಿ ನೋಂದಣಿ ಮಾಡಿಸಿ ಕೊಳ್ಳಲಾಗಿದೆ. ಇವರಲ್ಲಿ 3554(ಇಂದು 41) ಮಂದಿ 28 ದಿನಗಳ ನಿಗಾ ವನ್ನೂ, 4394 (50) ಮಂದಿ 14 ದಿನಗಳ ನಿಗಾವನ್ನು ಪೂರ್ಣಗೊಳಿಸಿದ್ದಾರೆ.

ಜಿಲ್ಲೆಯಲ್ಲಿ ಈಗಲೂ 267 ಮಂದಿ ಹೋಮ್ ಕ್ವಾರಂಟೈನ್‌ನಲ್ಲೂ, 8142 ಮಂದಿ ವಿವಿಧ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಹಾಗೂ 84 ಮಂದಿ ಆಸ್ಪತ್ರೆ ಕ್ವಾರಂಟೈನ್‌ನಲ್ಲಿದ್ದಾರೆ ಎಂದು ಾ.ಸುಧೀರ್‌ಚಂದ್ರ ಸೂಡ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News