ದಾವಣಗೆರೆ: ಕ್ವಾರಂಟೈನ್‍ನಲ್ಲಿದ್ದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Update: 2020-05-25 18:10 GMT

ದಾವಣಗೆರೆ, ಮೇ.25: ಕ್ವಾರಂಟೈನ್‍ನಲ್ಲಿದ್ದ ಆನೆಕೊಂಡದ ವ್ಯಕ್ತಿಯೊಬ್ಬರು ಜಿಲ್ಲಾಸ್ಪತ್ರೆಯ ಬಾತ್ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣವಾಗಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. 

ನಿವಾಸಿ ಬಿ.ಎಂ. ಮಂಜುನಾಥ (34) ಆತ್ಮಹತ್ಯೆಗೆ ಶರಣವಾಗಿರುವ ವ್ಯಕ್ತಿ.

ಆನೆಕೊಂಡದ ಕಂಟೈನ್ಮೆಟ್ ಝೋನ್‍ ನಲ್ಲಿದ್ದ ಇವರನ್ನು ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು. ಮೇ 20 ರಂದು ಗಂಟಲು ಮಾದರಿ ಸಂಗ್ರಹಿಸಿ ಕಳುಹಿಸಲಾಗಿತ್ತು. ಇವರ ವರದಿಯು ನೆಗಟಿವ್ ಬಂದಿದೆ. ಆದರೆ ಮಧುಮೇಹ ಸೇರಿದಂತೆ ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದರು. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಬಡಾವಣಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News