ರಾಜ್ಯದಲ್ಲಿ ಇಂದು 100 ಮಂದಿಗೆ ಕೊರೋನ ಪಾಸಿಟಿವ್ ; ಸೋಂಕಿತರ ಸಂಖ್ಯೆ 2282ಕ್ಕೆ ಏರಿಕೆ

Update: 2020-05-26 12:33 GMT

ಬೆಂಗಳೂರು : ರಾಜ್ಯದಲ್ಲಿ ಸೋಮವಾರ ಸಂಜೆ 5 ಗಂಟೆಯಿಂದ ಮಂಗಳವಾರ ಮಧ್ಯಾಹ್ನ 12ರ ಅವಧಿಯಲ್ಲಿ 100 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟನೆ ತಿಳಿಸಿದೆ. 

ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2282 ಕ್ಕೆ ಏರಿಕೆಯಾಗಿದ್ದು, ಅದರಲ್ಲಿ 722 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದ 1514 ಮಂದಿಯನ್ನು ಆಯಾ ಜಿಲ್ಲಾ ನಿಗದಿತ ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೋವಿಡ್-19 ಸೋಂಕಿನಿಂದ ಮೃತ ಪಟ್ಟವರ ಒಟ್ಟು ಸಂಖ್ಯೆ 44ಕ್ಕೆ ಏರಿದೆ.

ಇಂದು ಚಿತ್ರದುರ್ಗದ 20 ಮಂದಿಗೆ ಸೋಂಕು ದೃಢವಾಗಿದ್ದು, ಯಾದಗಿರಿಯ 14, ಬೆಳಗಾವಿ 13, ಹಾಸನದ 13, ದಾವಣಗೆರೆಯ 11ಬೀದರ್ 10, ವಿಜಯಪುರ 5, ದಕ್ಷಿಣ ಕನ್ನಡ ಜಿಲ್ಲೆಯ 3,  ಉಡುಪಿ 3, ಬೆಂಗಳೂರು ನಗರ, ಕೋಲಾರದ ತಲಾ ಇಬ್ಬರು, ಬಾಗಲಕೋಟೆ, ಚಿಕ್ಕಬಳ್ಳಾಪುರ,  ಕೊಪ್ಪಳ, ಬಳ್ಳಾರಿಯ ತಲಾ ಓರ್ವರಲ್ಲಿ ಸೋಂಕು ಪತ್ತೆಯಾಗಿರುವುದಾಗಿ  ಆರೋಗ್ಯ ಇಲಾಖೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News