ಬಹ್ರೈನ್, ಸೌದಿ, ದುಬೈಯಲ್ಲಿರುವ ಕನ್ನಡಿಗ ಉದ್ಯಮಿಗಳೊಂದಿಗೆ ಸಿದ್ದರಾಮಯ್ಯ ವೀಡಿಯೋ ಕಾನ್ಫರೆನ್ಸ್

Update: 2020-05-26 17:36 GMT

ಬೆಂಗಳೂರು, ಮೇ 26: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಅನಿವಾಸಿ ಕನ್ನಡಿಗ ಉದ್ಯಮಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ನಲ್ಲಿ ಮಾತುಕತೆ ನಡೆಸಿದರು.

ಬಹ್ರೈನ್, ಸೌದಿ ಅರೇಬಿಯಾ ಮತ್ತು ದುಬೈನಲ್ಲಿ ನೆಲೆಸಿರುವ ಲಾಕ್ ಡೌನ್ ನಿಂದಾಗಿ ಸಂಕಷ್ಟದಲ್ಲಿರುವ ಅನಿವಾಸಿ ಕನ್ನಡಿಗರನ್ನು ಊರಿಗೆ ಕರೆತರಲು ಸರಕಾರಕ್ಕೆ ಒತ್ತಡ ಹೇರಲು ಕನ್ನಡಿಗ ಉದ್ಯಮಿಗಳು ಸಿದ್ದರಾಮಯ್ಯ ಅವರಿಗೆ ಈ ಸಂದರ್ಭದಲ್ಲಿ ಮನವಿ ಮಾಡಿದರು. 

ಕೊಲ್ಲಿ ರಾಷ್ಟ್ರಗಳಲ್ಲಿ ಕನ್ನಡಿಗರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಐಒಸಿ ಬಹ್ರೈನ್‌ನ ಅಧ್ಯಕ್ಷ ಮುಹಮ್ಮದ್ ಮನ್ಸೂರ್, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ವಿವರಿಸಿದರು. ಬಹ್ರೈನ್, ಸೌದಿ ಅರೇಬಿಯಾ ಮತ್ತು ಯುಎಇಗಳಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ಸಾವಿರಾರು ಕನ್ನಡಿಗರಲ್ಲಿ ಹೆಚ್ಚಿನವರು ಗರ್ಭಿಣಿಯರು, ವೃದ್ಧರು ಮತ್ತು ತಕ್ಷಣದ ವೈದ್ಯಕೀಯ ಆರೈಕೆಯ ಅಗತ್ಯವಿರುವ ರೋಗಿಗಳು. ಅವರನ್ನು ಊರಿಗೆ ಕರೆತರಲು ಸರಕಾರಕ್ಕೆ ಒತ್ತಡ ಹೇರಬೇಕೆಂದು ಅವರು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು. 

ಈ ವಿಷಯವನ್ನು ಮುಖ್ಯಮಂತ್ರಿ ಮತ್ತು ಸಂಬಂಧಪಟ್ಟ ಇತರ ಅಧಿಕಾರಿಗಳ ಗಮನಕ್ಕೆ ತರುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದರು.

ಎಕ್ಸ್‌ಪರ್ಟೈಸ್ ಕಾಂಟ್ರಾಕ್ಟಿಂಗ್ ಕಂಪೆನಿ ನಿರ್ದೇಶಕ ಶೇಖ್ ಕರ್ನಿರೆ, ಐಒಸಿ ಬಹ್ರೈನ್‌ನ ಕಾರ್ಯದರ್ಶಿ ಮುಹಮ್ಮದ್ ಗಯಾಝುಲ್ಲಾ, ರಿಯಲ್‌ಟೆಕ್ ಇಂಡಸ್ಟ್ರಿಯಲ್ ಸರ್ವೀಸಸ್‌ನ ಸಿಇಒ ಇಸ್ಮಾಯಿಲ್ ಇತರರು ವೀಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News