ಉಡುಪಿ: ಸೋಮವಾರ 3 ಹೊಸ ಕೊರೋನ ವೈರಸ್ ಪ್ರಕರಣ

Update: 2020-05-26 15:01 GMT

ಉಡುಪಿ, ಮೇ 26: ರವಿವಾರ ಮತ್ತು ಸೋಮವಾರ ಒಟ್ಟು 55 ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾದ ಬಳಿಕ ಉಡುಪಿ ಜಿಲ್ಲೆಯಲ್ಲಿ ಸೋಮವಾರ ಅಬ್ಬರ ಸ್ವಲ್ಪ ಇಳಿಮುಖವಾಗಿದ್ದು, ಕೇವಲ ಮೂರು ಪಾಸಿಟಿವ್ ಪ್ರಕರಣಗಳು ಮಾತ್ರ ವರದಿಯಾಗಿವೆ. ಈ ಮೂಲಕ ಈವರೆಗೆ ವರದಿಯಾದ ಪ್ರಕರಣಗಳ ಸಂಖ್ಯೆ 111ಕ್ಕೇರಿದೆ.

ಮಹಾರಾಷ್ಟ್ರದಿಂದ ಊರಿಗೆ ಬಂದ ಮೂವರಲ್ಲಿ ಇಂದು ಪಾಸಿಟಿವ್ ಪ್ರಕರಣ ಕಂಡು ಬಂದಿದೆ. 27 ವರ್ಷದ ಯುವಕ (ಪಿ-2230), 30 ವರ್ಷದ ಯುವತಿ (2233) ಹಾಗೂ 9 ವರ್ಷ ಪ್ರಾಯದ ಬಾಲಕಿ (2256)ಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದ ಮೂವರಲ್ಲಿ ಇಬ್ಬರು ಉಡುಪಿಯವರು ಹಾಗೂ ಒಬ್ಬರು ಕಾರ್ಕಳದವರು. ಮೂವರೂ ಮುಂಬೈಯಿಂದ ಬಂದವರಾ ಗಿದ್ದು ಇವರಿಗೆ ಒಟ್ಟು 29 (6+7+16) ಮಂದಿ ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲಾಗಿದೆ ಎಂದರು. ಎರಡು ದಿನಗಳ ಹಿಂದೆ ಕೊರೋನಕ್ಕೆ ಪಾಸಿಟಿವ್ ಆದ ಕಾರ್ಕಳದ 22ರ ಹರೆಯದ ತುಂಬು ಗರ್ಭಿಣಿಯ ಗಂಟಲು ದ್ರವ ಮಾದರಿಯನ್ನು ಮರು ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿದ್ದು, ಅದರ ವರದಿ ಇನ್ನೂ ಬಂದಿಲ್ಲ. ಆಕೆ ಸದ್ಯ ಮನೆಯಲ್ಲೇ ಕ್ವಾರಂಟೈನ್ನಲ್ಲಿದ್ದಾರೆ ಎಂದು ಸೂಡ ತಿಳಿಸಿದರು.

ಈಗ ಜಿಲ್ಲೆಯಲ್ಲಿ ಇರುವ 107 ಸಕ್ರೀಯ ಪ್ರಕರಣಗಳಲ್ಲಿ 105 ಮಂದಿ ನಗರದ ಡಾ.ಟಿಎಂಎ ಪೈ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿ ದ್ದಾರೆ. ಕಾರ್ಕಳದ 22ರ ಹರೆಯದ ಗರ್ಭಿಣಿ ಹಾಗೂ ವರದಿಯಲ್ಲಿ ಸ್ವಲ್ಪ ಗೊಂದಲ ವಿರುವ 30ರ ಹರೆಯದ ಜಿಪಂ ಸಿಬ್ಬಂದಿ ಸದ್ಯ ಅವರ ಮನೆಯಲ್ಲೇ ಕ್ವಾರಂಟೈನ್‌ನಲ್ಲಿದ್ದು, ಅವರ ಅಂತಿಮ ವರದಿಗಳು ಬಂದ ಬಳಿಕ ಆಸ್ಪತ್ರೆಗೆ ದಾಖಲಿಸಲಾಗುವುದು ಎಂದು ಡಾ.ಸೂಡ ತಿಳಿಸಿದರು.

3 ಪಾಸಿಟಿವ್, 150 ನೆಗೆಟಿವ್: ಕೋವಿಡ್ -19 ಸೋಂಕಿನ ಪರೀಕ್ಷೆಗಾಗಿ ಕಳುಹಿಸಿದ ಶಂಕಿತರ ಗಂಟಲು ದ್ರವದ ಮಾದರಿಗಳಲ್ಲಿ ಮಂಗಳವಾರ ಮೂರು ಮಾದರಿಗಳು ಪಾಸಿಟಿವ್ ಫಲಿತಾಂಶವನ್ನು ನೀಡಿದ್ದೆ, 150 ವರದಿಗಳು ನೆಗೆಟಿವ್ ಆಗಿವೆ. ಜಿಲ್ಲೆಯಲ್ಲಿ ಈವರೆಗೆ 9787 ಶಂಕಿತರ ಗಂಟಲು ದ್ರವ ಮಾದರಿಗಳನ್ನು ಪ್ರಯೋಗಾಲಯದ ಪರೀಕ್ಷೆಗೆ ಕಳುಹಿಸಲಾಗಿದೆ. ಇವುಗಳಲ್ಲಿ 3819ರ ಪರೀಕ್ಷಾ ವರದಿ ಬಂದಿವೆ. ಇವುಗಳಲ್ಲಿ 3708 ನೆಗೆಟಿವ್ ಆಗಿದ್ದರೆ, ಒಟ್ಟು 111 ಸ್ಯಾಂಪಲ್‌ಗಳು ಪಾಸಿಟಿವ್ ಆಗಿ ಬಂದಿವೆ. ಇವುಗಳಲ್ಲಿ 107 ಸಕ್ರಿಯ ಪ್ರಕರಣಗಳಿವೆ ಎಂದು ಡಾ.ಸೂಡ ತಿಳಿಸಿದರು.

ಜಿಲ್ಲೆಯಲ್ಲಿ ಈವರೆಗೆ 9787 ಶಂಕಿತರ ಗಂಟಲುದ್ರವ ಮಾದರಿಗಳನ್ನು ಪ್ರಯೋಗಾಲಯದ ಪರೀಕ್ಷೆಗೆ ಕಳುಹಿಸಲಾಗಿದೆ. ಇವುಗಳಲ್ಲಿ 3819ರ ಪರೀಕ್ಷಾ ವರದಿ ಬಂದಿವೆ. ಇವುಗಳಲ್ಲಿ 3708 ನೆಗೆಟಿವ್ ಆಗಿದ್ದರೆ, ಒಟ್ಟು 111 ಸ್ಯಾಂಪಲ್‌ಗಳು ಪಾಸಿಟಿವ್ ಆಗಿ ಬಂದಿವೆ. ಇವುಗಳಲ್ಲಿ 107 ಸಕ್ರಿಯ ಪ್ರಕರಣಗಳಿವೆ ಎಂದು ಡಾ.ಸೂಡ ತಿಳಿಸಿದರು.

5968 ವರದಿ ಬಾಕಿ:  ಜಿಲ್ಲೆಯಲ್ಲಿ ಮಂಗಳವಾರ ಕೊರೋನ ಸೋಂಕಿನ ಗುಣ ಲಕ್ಷಣ ಗಳನ್ನು ಹೊಂದಿರುವ ಇನ್ನೂ 1581 ಮಂದಿಯ ಗಂಟಲು ದ್ರವ ಮಾದರಿಗಳನ್ನು ಆರೋಗ್ಯ ಇಲಾಖೆ ಪರೀಕ್ಷೆಗಾಗಿ ಕಳುಹಿಸಿದೆ.ಇವುಗಳಲ್ಲಿ 1511 ಸ್ಯಾಂಪಲ್‌ಗಳನ್ನು ಕೊರೋನ ಹಾಟ್‌ಸ್ಪಾಟ್ ಎನಿಸಿರುವ ಹೊರರಾಜ್ಯಗಳಿಂದ ಬಂದವರಿಂದ, ಈಗಾಗಲೇ ಸೋಂಕಿತರಾದವರ ಸಂಪರ್ಕಿತರಿಂದ ಪಡೆದು ಪರೀಕ್ಷೆಗಾಗಿ ಕಳುಹಿಸಲಾಗಿದೆ. ಉಳಿದಂತೆ 66 ಮಂದಿ ಸೋಂಕಿತರ ಸಂಪರ್ಕಕ್ಕೆ ಬಂದವರು, ಒಬ್ಬರು ತೀವ್ರ ಉಸಿರಾಟ ತೊಂದರೆಯವರು, ಮೂವರು ಶೀತಜ್ವರದಿಂದ ಬಳಲುವವರ ಸ್ಯಾಂಪಲ್‌ಗು ಸೇರಿವೆ ಎಂದು ಡಿಎಚ್‌ಓ ತಿಳಿಸಿದರು.

ಶಂಕಿತ ನೋವೆಲ್ ಕೊರೋನ ಸೋಂಕಿನ ಪರೀಕ್ಷೆಗಾಗಿ ಇಂದು ಮತ್ತೆ 18 ಮಂದಿ ಆಸ್ಪತ್ರೆಗಳ ಐಸೋಲೇಶನ್ ವಾರ್ಡಿಗೆ ದಾಖಲಾಗಿದ್ದಾರೆ. ಇವರಲ್ಲಿ 13 ಮಂದಿ ಪುರುಷ ಹಾಗೂ ಐವರು ಮಹಿಳೆಯರಿದ್ದಾರೆ. ಆರು ಮಂದಿ ಕೊರೋನ ಶಂಕಿತರು, 9 ಮಂದಿ ತೀವ್ರತರದ ಉಸಿರಾಟ ತೊಂದರೆ ಹಾಗೂ ಮೂವರು ಶೀತಜ್ವರದ ಬಾಧೆ ಪರೀಕ್ಷೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿವಿಧ ಆಸ್ಪತ್ರೆಗಳ ಐಸೋಲೇಶನ್ ವಾರ್ಡಿನಿಂದ ಇಂದು 29 ಮಂದಿ ಬಿಡುಗಡೆಗೊಂಡಿದ್ದು, 103 ಮಂದಿ ಇನ್ನೂ ವೈದ್ಯರ ನಿಗಾದಲ್ಲಿ ಚಿಕಿತ್ಸೆಯಲ್ಲಿದ್ದಾರೆ. ಇದುವರೆಗೆ 624 ಮಂದಿ ಚಿಕಿತ್ಸೆ ಪಡೆದು ಐಸೋಲೇಶನ್ ವಾರ್ಡಿನಿಂದ ಬಿಡುಗಡೆಗೊಂಡಿದ್ದಾರೆ ಎಂದರು.

ಜಿಲ್ಲೆಯಲ್ಲಿ ಕೊರೋನ ಸೋಂಕಿನ ಗುಣಲಕ್ಷಣದ 18 ಮಂದಿ ಇಂದು ಹೊಸದಾಗಿ ನೋಂದಣಿಗೊಂಡಿದ್ದು, ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ ಒಟ್ಟು 4877 ಮಂದಿಯನ್ನು ಕೊರೋನ ತಪಾಸಣೆಗಾಗಿ ನೋಂದಣಿ ಮಾಡಿಸಿ ಕೊಳ್ಳಲಾಗಿದೆ. ಇವರಲ್ಲಿ 3596(ಇಂದು 42) ಮಂದಿ 28 ದಿನಗಳ ನಿಗಾ ವನ್ನೂ, 4472 (78) ಮಂದಿ 14 ದಿನಗಳ ನಿಗಾವನ್ನು ಪೂರ್ಣಗೊಳಿಸಿದ್ದಾರೆ.

ಜಿಲ್ಲೆಯಲ್ಲಿ ಈಗಲೂ 224 ಮಂದಿ ಹೋಮ್ ಕ್ವಾರಂಟೈನ್‌ನಲ್ಲೂ, 8142 ಮಂದಿ ವಿವಿಧ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಹಾಗೂ 78 ಮಂದಿ ಆಸ್ಪತ್ರೆ ಕ್ವಾರಂಟೈನ್‌ನಲ್ಲಿದ್ದಾರೆ ಎಂದು ಡಾ.ಸುಧೀರ್ ‌ಚಂದ್ರ ಸೂಡ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News