ಕುಂದಾಪುರ: ಬಿಸಿಯೂಟ ನೌಕರರ ಬೇಡಿಕೆ ಈಡೇರಿಕೆ ಆಗ್ರಹಿಸಿ ಮನವಿ

Update: 2020-05-26 15:03 GMT

ಕುಂದಾಪುರ, ಮೇ 26: ಬಿಸಿಯೂಟ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕುಂದಾಪುರ ತಾಲೂಕು ಅಕ್ಷರದಾಸೋಹ ನೌಕರರ ಸಂಘದ ವತಿಯಿಂದ ಕುಂದಾಪುರ ಉಪತಹಸೀಲ್ದಾರ್ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ನೀಡಲಾಯಿತು.

ಎಪ್ರಿಲ್ ತಿಂಗಳಿನಿಂದ ಶಾಲಾ ಪುನಾರಂಭವಾಗುವವರೆಗೂ ಸಂಪೂರ್ಣ ವೇತನ ನೀಡಬೇಕು. ಬಿಸಿಯೂಟ ನೌಕರರಿಗೆ ಎಲ್ಐಸಿ ಆಧಾರಿತ ಪಿಂಚಣಿ ನೀಡಬೇಕು. ಬಿಸಿಯೂಟ ನೌಕರರನ್ನು ಖಾಯಂಗೊಳಿಸಬೇಕು. ನೌಕರರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರವೇಶ ಶುಲ್ಕ, ಇತರೆ ಶುಲ್ಕ ಗಳಿಂದ ಸಂಪೂರ್ಣ ವಿನಾಯಿತಿ ನೀಡಬೇಕು. ಬಿಸಿಯೂಟ ನೌಕರರ ಮತ್ತು ಅವರ ಕುಟುಂಬಗಳಿಗೆ ಉಚಿತ ಆರೋಗ್ಯ ಸೌಲಭ್ಯಗಳು ನೀಡಬೇಕು. ಬಾಕಿ ಇರುವ ವೇತನ ಕೂಡಲೇ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಜಿಲ್ಲಾ ಉಪಾಧ್ಯಕ್ಷ ಮಹಾಬಲವಡೇರ ಹೋಬಳಿ, ಅಕ್ಷರದಾಸೋಹ ನೌಕರರ ಸಂಘದ ತಾಲೂಕು ಮುಖಂಡರಾದ ನಾಗರತ್ನ, ಕೆ.ವಿನೋದ, ಗೀತಾ, ರಾಖಿ, ಮೀನಾಕ್ಷಿ, ರಾಧಿಕ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News