ಮಂಗಳೂರು: ವಿದ್ಯುತ್ ಬಿಲ್ ಮನ್ನಾ ಮಾಡಲು ಡಿವೈಎಫ್‌ಐ ಮನವಿ

Update: 2020-05-26 17:05 GMT

ಮಂಗಳೂರು, ಮೇ 26: ಕೊರೋನ-ಲಾಕ್‌ಡೌನ್ ಅವಧಿಯು ಜನಸಾಮಾನ್ಯರನ್ನು ಸಂಕಷ್ಟದ ಕೂಪಕ್ಕೆ ತಳ್ಳಿದೆ. ದೈನಂದಿನ ಖರ್ಚಿಗಾಗಿ ದಿನದ ದುಡಿಮೆಯಲ್ಲೇ ಜೀವನ ಸಾಗಿಸುತ್ತಿದ್ದ ಕುಟುಂಬಗಳು ಒಂದ್ಹೊತ್ತಿನ ಊಟಕ್ಕಾಗಿ ಕೈಚಾಚುವ ಸ್ಥಿತಿ ನಿರ್ಮಾಣಗೊಂಡಿದೆ. ಹಾಗಾಗಿ ಲಾಕ್‌ಡೌನ್ ಅವಧಿಯ ಮೂರು ತಿಂಗಳ ವಿದ್ಯುತ್ ಬಿಲ್ ಮನ್ನಾ ಮಾಡುವಂತೆ ಡಿವೈಎಫ್‌ಐ ಮಂಗಳೂರು ನಗರ ಸಮಿತಿಯು ಮಂಗಳವಾರ ಬಿಜೈನ ಮೆಸ್ಕಾಂ ಕಚೇರಿಯಲ್ಲಿ ವ್ಯವಸ್ಥಾಪಕರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಮೆಸ್ಕಾಂ ಈವರೆಗೆ ಜಿಲ್ಲೆಯಲ್ಲಿ ಲಾಭದಾಯಕವಾಗಿ ಮುನ್ನಡೆದಿದೆ. ಮೆಸ್ಕಾಂ ಸೇವಾ ಮನೋಭಾವನೆಯಿಂದ ವರ್ತಿಸಬೇಕಿದೆ. ಹಾಗಾಗಿ ಮೂರು ತಿಂಗಳ ಬಿಲ್ ಮನ್ನಾ ಮಾಡಬೇಕು. ಆರು ತಿಂಗಳವರೆಗೆ ಬಿಲ್ಲು ಪಾವತಿಸಲು ಬಲವಂತ ಪಡಿಸದೆ ಸಮಯಾವಕಾಶ ನೀಡಬೇಕು ಎಂದು ಡಿವೈಎಫ್‌ಐ ಮಂಗಳೂರು ನಗರ ಸಮಿತಿಯ ಒತ್ತಾಯಿಸಿತು.

ಡಿವೈಎಫ್‌ಐ ಮಂಗಳೂರು ನಗರ ಸಮಿತಿಯ ಅಧ್ಯಕ್ಷ ನವೀನ್ ಬೊಲ್ಪುಗುಡ್ಡೆ, ಪ್ರಶಾಂತ್ ಎಂ.ಬಿ, ನಾಗೇಂದ್ರ, ರಘವೀರ್, ಮಾದುರಿ ಬೋಳಾರ ನಿಯೋಗದಲ್ಲಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News