ಬೇರೆ ರಾಜ್ಯಗಳಿಂದ ಬೆಂಗಳೂರಿಗೆ 42 ಸಾವಿರ ಜನ ಆಗಮನ: ತಹಶೀಲ್ದಾರ್

Update: 2020-05-26 17:29 GMT

ಬೆಂಗಳೂರು, ಮೇ 26: ಬೇರೆ ರಾಜ್ಯಗಳಿಂದ ಬೆಂಗಳೂರಿಗೆ 42 ಸಾವಿರಕ್ಕೂ ಹೆಚ್ಚು ಜನರು ಬಂದಿದ್ದು ಅವರಿರುವ ಸ್ಥಳಗಳನ್ನು ಪತ್ತೆಹಚ್ಚಿ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ತಹಶೀಲ್ದಾರ್ ಎನ್. ರಘುಮೂರ್ತಿ ತಿಳಿಸಿದರು. 

ಯಲಹಂಕದ ಮಿನಿ ವಿಧಾನಸೌಧದಲ್ಲಿ ಹಮ್ಮಿಕೊಂಡಿದ್ದ ಕೋವಿಡ್-19 ಕಾರ್ಯಪಡೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸರಕಾರದ ಅನುಮತಿ ಮೇರೆಗೆ 42 ಸಾವಿರ ಮಂದಿ ಬೆಂಗಳೂರಿಗೆ ಬಂದಿದ್ದು, ಅದರಲ್ಲಿ 12 ಸಾವಿರ ಮಂದಿಯ ದಾಖಲೆ ಜಿಲ್ಲಾಧಿಕಾರಿಗಳ ಬಳಿ ಇದ್ದು ಉಳಿದ 30 ಸಾವಿರ ಜನರ ಬಗ್ಗೆ ಮಾಹಿತಿ ಇಲ್ಲ. ಇವರನ್ನು ಪತ್ತೆ ಹಚ್ಚಿ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕಿದೆ. ಇಲ್ಲದಿದ್ದರೆ ಅಪಾಯವಾಗುವ ಸಾಧ್ಯತೆ ಇದೆ ಎಂದು ಹೇಳಿದರು. 

ನಗರಕ್ಕೆ ಆಗಮಿಸಿರುವ 30 ಮಂದಿಯ ಫೋನ್ ಸಂಖ್ಯೆಗಳು ದೊರೆತಿದ್ದು ಅವರ ಪತ್ತೆ ಕಾರ್ಯ ಆರಂಭವಾಗಿದೆ. ಈ ಕಾರ್ಯಕ್ಕಾಗಿ ಕಾಲೇಜಿನ ಉಪನ್ಯಾಸಕರಿಗೆ ತರಬೇತಿ ನೀಡಿದ್ದು ಮೂರು ನಾಲ್ಕು ದಿನಗಳಲ್ಲಿ ಪತ್ತೆ ಹಚ್ಚಲಾಗುವುದು ಎಂದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News