ಅಕ್ರಮ ಮರಳುಗಾರಿಕೆ ತಡೆಗೆ ಮಾಜಿ ಸಚಿವ ರಮಾನಾಥ ರೈ ಜಿಲ್ಲಾಧಿಕಾರಿಗೆ ಮನವಿ

Update: 2020-05-26 17:35 GMT

ಮಂಗಳೂರು, ಮೇ 26: ಬಂಟ್ವಾಳ ತಾಲೂಕಿನ ಕೆಲವೆಡೆ ಅಕ್ರಮ ಮರಳುಗಾರಿಕೆಯಾಗುತ್ತಿದ್ದು, ಅದನ್ನು ತಡೆಯುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಮನವಿ ಮಾಡಿದರು.

ಬಂಟ್ವಾಳ ತಾಲೂಕಿನಲ್ಲಿ ಮುಖ್ಯವಾಗಿ ಮಣಿನಾಲ್ಕೂರು , ಕಡೇಶ್ವಾಲ್ಯ, ಕರ್ಪೆ ಪ್ರದೇಶದಲ್ಲಿ ವ್ಯಾಪಕವಾದ ಅಕ್ರಮ ಮರಳುಗಾರಿಕೆ ದಂಧೆ ನಡೆಯುತ್ತಿದೆ. ರಾಜಾರೋಷವಾಗಿ ಈ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದರೂ ಗಣಿಗಾರಿಕಾ ಇಲಾಖೆ , ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಇದನ್ನು ನಿಯಂತ್ರಣ ಮಾಡಲು ಯಾವುದೇ ಕ್ರಮವನ್ನು ಕ್ರಗೊಳ್ಳುತ್ತಿಲ್ಲ. ಅನೇಕ ಭಾರೀ ಸಂಬಂಧಪಟ್ಟವರಿಗೆ ತಿಳಿಸಿದರೂ ರಾಜಕೀಯ ಪ್ರಭಾವದಿಂದ ಇವರ ಬಗ್ಗೆ ಕ್ರಮ ಕೈಗೊಳ್ಳಲು ಇಲಾಖೆಯು ನಿಷ್ಕ್ರಿಯವಾಗಿದ್ದಾರೆ. ಇದರಿಂದ ಸರಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂಪಾಯಿ ನಷ್ಟವಾಗುತ್ತಿದೆ.ಈ ಬಗ್ಗೆ ನಿಷ್ಪಕ್ಷಪಾತವಾಗಿ ಅಗತ್ಯವಾದ ಕಾನೂನು ಕ್ರಮವನ್ನು ಕೈಗೊಳ್ಳಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಮನವಿುಲ್ಲಿ ಜಿಲ್ಲಾಧಿಕಾರಿಯನ್ನು ಆಗ್ರಹಿಸಿದ್ದಾರೆ.

ಈ ಸಂದರ್ಭ ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಂ.ಎಸ್. ಮಹಮ್ಮದ್, ಮಂಜುಳಾ ಮಾಧವ ಮಾವೆ, ಮಾಯಿಲಪ್ಪ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News