ಮನಪಾ: ಡೆಂಗಿ, ಮಲೇರಿಯಾ ನಿಯಂತ್ರಕ್ಕೆ ಸೊಳ್ಳೆ ಪರದೆ ವಿತರಣೆ

Update: 2020-05-27 07:27 GMT

ಮಂಗಳೂರು, ಮೇ 27: ಮಳೆಗಾಲ ಸಮೀಪಿಸುತ್ತಿರುವಂತೆಯೇ ಮಲೇರಿಯಾ, ಡೆಂಗಿಯಂತಹ ಸಾಂಕ್ರಾಮಿಕ ರೋಗಗಳ ಭೀತಿಯೂ ಕಾಡಲಾರಂಭಿಸಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಸಾರ್ವಜನಿಕರಿಗೆ ಸೊಳ್ಳೆ ಪರದೆ ವಿತರಣೆ ಕಾರ್ಯವನ್ನು ಆರಂಭಿಸಲಾಗಿದೆ.

ಮೇಯರ್ ದಿವಾಕರ ಪಾಂಡೇಶ್ವರ ನೇತೃತ್ವದಲ್ಲಿ ಇಂದು ಸೊಳ್ಳೆ ಪರದೆ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಮನಪಾ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಪೂರ್ಣಿಮಾ, ಕಾರ್ಪೊರೇಟರ್ ಪ್ರೇಮಾನಂದ ಶೆಟ್ಟಿ ಪಾಲಿಕೆಯ ಪೌರ ಕಾರ್ಮಿಕರಿಗೆ ಸೊಳ್ಳೆ ಪರದೆಗಳನ್ನು ವಿತರಿಸಿದರು.

ಮಹಾನಗರ ಪಾಲಿಕೆಯ ಹೊರಗುತ್ತಿಗೆ ಕಾರ್ಮಿಕರಿಗೂ ಪರದೆಯನ್ನು ವಿತರಿಸಲಾಗುತ್ತಿದೆ. ಪಾಲಿಕೆಯ ಪ್ರತಿ ವಾರ್ಡ್‌ನಲ್ಲಿ ತಲಾ 1000 ಸೊಳ್ಳೆ ಪರದೆ ನೀಡಲಾಗುವುದು ಎಂದು ಪಾಲಿಕೆಯ ಪರಿಸರ ಅಭಿಯಂತರ ಮಧು ಮನೋಹರ್ ತಿಳಿಸಿದ್ದಾರೆ.

ಸೊಳ್ಳೆ ಪರದೆ ವಿತರಣೆ ಸಂದರ್ಭ ಪಾಲಿಕೆಯ ಆರೋಗ್ಯ ಅಧಿಕಾರಿ ಮಂಜಯ್ಯ ಶೆಟ್ಟಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News