ನೆಹರೂ ಸ್ವತಂತ್ರ ಭಾರತ ಅಭಿವೃದ್ಧಿಯ ಹರಿಕಾರ: ರಮಾನಾಥ ರೈ

Update: 2020-05-27 09:03 GMT

ಮಂಗಳೂರು, ಮೇ 27: ಅಲಿಪ್ತ ನೀತಿ, ಪಂಚಶೀಲ ತತ್ವಗಳ ಮೂಲಕ ಜಾಗತಿಕ ಮನ್ನಣೆಗೆ ಭಾರತವು ಪಾತ್ರವಾಗಲು ಕಾರಣೀಭೂತರಾದ ಪಂಡಿತ್ ಜವಾಹರ್ ಲಾಲ್ ನೆಹರೂ ಪಂಚ ವಾರ್ಷಿಕ ಯೋಜನೆಗಳ ಮೂಲಕ ದೇಶದ ಸಮಗ್ರ ಅಭಿವೃದ್ಧಿಗೆ ನೀಡಿರುವ ಕೊಡುಗೆ ಅಪಾರ ಎಂದು ಮಾಜಿ ಸಚಿವ ಬಿ ರಮಾನಾಥ ರೈ ಹೇಳಿದ್ದಾರೆ.

ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಏರ್ಪಡಿಸಲಾದ ಮಾಜಿ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರೂ ಅವರ 56ನೇ ಪುಣ್ಯಥಿತಿ ಸಂದರ್ಭದಲ್ಲಿ ಅವರು ನೆಹರೂ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನುಡಿನಮನ ಸಲ್ಲಿಸಿದರು.

ಗಾಂಧೀಜಿ, ನೆಹರು ಆದರ್ಶಗಳು ದೇಶಾದಂತ್ಯ ಅನಾವರಣಗೊಳ್ಳಬೇಕಾದ ಅಗತ್ಯವಿದೆ ಎಂದು ರಮಾನಾಥ ರೈ ಅಭಿಪ್ರಾಯಿಸಿದರು.

ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಮನಪಾ ವಿರೋಧ ಪಕ್ಷ ನಾಯಕ ಅಬ್ದುಲ್ ರವೂಫ್, ಪಕ್ಷದ ಮುಖಂಡರಾದ ಪಿ.ವಿ.ಮೋಹನ್, ಶಶಿಧರ್ ಹೆಗ್ಡೆ, ವಿಶ್ವಾಸ್ ಕುಮಾರ್ ದಾಸ್, ಪ್ರಸಾದ್ ರಾಜ್ ಕಾಂಚನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಹಿಳಾ ಕಾಂಗ್ರೆಸ್ ಜಿಲ್ಲಾ ಕಾಂಗ್ರೆಸ್ ಮುಖಂಡರು, ಮನಪಾ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

ನೀರಜ್ ಪಾಲ್, ಖಾಲಿದ್ ಉಜಿರೆ, ಪ್ರೇಮ್ ಬಲ್ಲಾಳ್ ಬಾಗ್, ಸಬೀರ್ ಸಿದ್ದಕಟ್ಟೆ, ಸ್ಟೀಫನ್ ಮರೋಳಿ ಸಹಕರಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News