×
Ad

ರೌಡಿಶೀಟರ್ ಮೇಲೆ ಹಲ್ಲೆ ಪ್ರಕರಣ: ಆರೋಪಿಗಳಿಗಾಗಿ ಮುಂದುವರಿದ ಶೋಧ ಕಾರ್ಯ

Update: 2020-05-27 18:22 IST

ಬೆಂಗಳೂರು, ಮೇ 27: ರೌಡಿ ಹಿದಾಯತ್ ಖಾನ್ ಮೇಲೆ ಮಾರಣಾಂತಿಕ ಹಲ್ಲೆ ಆರೋಪ ಸಂಬಂಧ ಪರಾರಿಯಾಗಿರುವ ಏಳು ಮಂದಿ ದುಷ್ಕರ್ಮಿಗಳ ಬಂಧನಕ್ಕೆ ನಂದಿನಿ ಲೇಔಟ್ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

ಇಲ್ಲಿನ ಲಗ್ಗೆರೆಯಲ್ಲಿ ಮಂಗಳವಾರ ಡಿ.ಜೆ.ಹಳ್ಳಿಯ ರೌಡಿ ಹಿದಾಯತ್ ಖಾನ್‍ನನ್ನು ಏಳು ಮಂದಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿ ಪರಾರಿಯಾಗಿದ್ದರು. ಹಲ್ಲೆಯಿಂದ ತೀವ್ರ ಗಾಯಗೊಂಡಿರುವ ಹಿದಾಯತ್‍ಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ಡಿಸಿಪಿ ಶಶಿಕುಮಾರ್ ತಿಳಿಸಿದ್ದಾರೆ.

ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಡಿ.ಜೆ.ಹಳ್ಳಿ ಠಾಣೆಯಲ್ಲೇ ಆತನ ವಿರುದ್ಧ ರೌಡಿ ಪಟ್ಟಿ ತೆರೆಯಲಾಗಿತ್ತು. ಹಳೆಯ ದ್ವೇಷದಿಂದಾಗಿ ಎದುರಾಳಿ ತಂಡದವರೇ ಆತನ ಮೇಲೆ ಹಲ್ಲೆ ಮಾಡಿದ್ದು, ಅವರ ಸುಳಿವು ಪತ್ತೆಯಾಗಿದೆ ಎಂದು ಶಶಿಕುಮಾರ್ ಹೇಳಿದರು.`

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News