×
Ad

ಕಲಬುರಗಿ: 4 ವರ್ಷದ ಮಗು ಸೇರಿ 28 ಮಂದಿಗೆ ಕೊರೋನ ಸೋಂಕು ದೃಢ

Update: 2020-05-27 18:46 IST

ಕಲಬುರಗಿ, ಮೇ 27: ಕಲಬುರಗಿ ಜಿಲ್ಲೆಯಲ್ಲಿ ಬುಧವಾರ ನಾಲ್ಕು ವರ್ಷದ ಹೆಣ್ಣು ಮಗು ಸೇರಿ 28 ಜನರಲ್ಲಿ ಕೊರೋನ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 185ಕ್ಕೆ ಏರಿಕೆಯಾಗಿದೆ.

ಎಲ್ಲರೂ ಮಹಾರಾಷ್ಟ್ರದಿಂದ ಬಂದು ಕ್ವಾರಂಟೈನ್‍ನಲ್ಲಿ ಇದ್ದರು. ಅವರ ತಪಾಸಣೆ ನಡೆಸಿದಾಗ ಸೋಂಕು ಪತ್ತೆಯಾಗಿದ್ದು, ಎಲ್ಲರನ್ನೂ ಜಿಮ್ಸ್ ಆಸ್ಪತ್ರೆಯಲ್ಲಿ ಆರಂಭಿಸಲಾದ ಕೊರೋನ ವಿಶೇಷ ವಾರ್ಡ್‍ಗೆ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನ ಇಷ್ಟೊಂದು ಪ್ರಕರಣಗಳು ಕಂಡು ಬಂದಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News