×
Ad

ಕ್ವಾರಂಟೈನ್ ಕೇಂದ್ರದ ಅವ್ಯವಸ್ಥೆ ವಿರುದ್ಧ ಉಡುಪಿ ಡಿಸಿಗೆ ಕಾಂಗ್ರೆಸ್ ಮನವಿ

Update: 2020-05-27 22:58 IST

ಉಡುಪಿ, ಮೇ 27: ಕೊರೋನ ಕ್ವಾರಂಟೈನ್ ಕೇಂದ್ರದಲ್ಲಿನ ಅವ್ಯವಸ್ಥೆ ಯನ್ನು ಸರಿಪಡಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿ ಯಿಂದ ಇಂದು ಉಡುಪಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಅದೇ ರೀತಿ ಗ್ರಾಮ ಪಂಚಾಯತ್‌ಗಳಿಗೆ ಬಿಜೆಪಿ ಕಾರ್ಯಕರ್ತರನ್ನು ನಾಮ ನಿರ್ದೇಶನ ಮಾಡುವ ಸರಕಾರದ ಹುನ್ನಾರದ ಬಗ್ಗೆ ಮತ್ತು ಅಕ್ರಮ ಮರಳು ಗಾರಿಕೆ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆಯೂ ಜಿಲ್ಲಾಧಿಕಾರಿಗೆ ಪ್ರತ್ಯೇಕ ಮನವಿಗಳನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಯು.ಆರ್.ಸಭಾಪತಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಫೂರ್, ಕಾಂಗ್ರೆಸ್ ಮುಖಂಡರಾದ ವೆರೋನಿಕಾ ಕರ್ನೇಲಿಯೋ, ದಿನೇಶ್ ಪುತ್ರನ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಬಿ.ನರಸಿಂಹಮೂರ್ತಿ, ಹರೀಶ್ ಕಿಣಿ, ಭಾಸ್ಕರ್ ರಾವ್ ಕಿದಿಯೂರು, ಮುರಲಿ ಶೆಟ್ಟಿ, ಮಂಜುನಾಥ ಪೂಜಾರಿ, ರೊಶನಿ ಒಲಿವರ್, ಹರೀಶ್ ಶೆಟ್ಟಿ ಪಾಂಗಳ, ಹಬೀಬ್ ಆಲಿ, ಕೀರ್ತಿ ಶೆಟ್ಟಿ, ಉದ್ಯಾವರ ನಾಗೇಶ್ ಕುಮಾರ್, ಕುಶಲ್ ಶೆಟ್ಟಿ, ಡಾ.ಸುನೀತಾ ಶೆಟ್ಟಿ, ಡೆರಿಕ್, ರಮೇಶ್ ಕಾಂಚನ್, ಸೂರ್ಯ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News