ಕಾರ್ಮಿಕರ ಕೆಲಸದ ಅವಧಿ ಹೆಚ್ಚಳ ಪ್ರಸ್ತಾಪ ಕೈಬಿಡಲು ಒತ್ತಾಯ

Update: 2020-05-28 16:54 GMT

ಬೆಂಗಳೂರು, ಮೇ 28: ಕೇಂದ್ರ ಸರಕಾರ ಕಾರ್ಮಿಕ ಕಾನೂನನ್ನು ತಿದ್ದುಪಡಿ ಮಾಡಿ ಕಾರ್ಮಿಕರ ಕೆಲಸದ ಅವಧಿಯನ್ನು 8ರಿಂದ 12 ಗಂಟೆವರೆಗೆ ಹೆಚ್ಚಿಸುವ ಪ್ರಸ್ತಾಪವನ್ನು ಕೂಡಲೇ ಕೈಬಿಡಬೇಕೆಂದು ಒತ್ತಾಯಿಸಿ ಅಖಿಲ ಭಾರತ ಮಹಿಳಾ ಸಾಂಸ್ಕøತಿಕ ಸಂಘಟನೆ ಒತ್ತಾಯಿಸಿದೆ.

ಗುರುವಾರ ರಾಜ್ಯ ಹಾಗೂ ಕೇಂದ್ರ ಸರಕಾರಗಳ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಅಖಿಲ ಭಾರತ ಪ್ರತಿಭಟನಾ ದಿನದ ಭಾಗವಾಗಿ ಎಐಎಂಎಸ್‍ಎಸ್ ಬೆಂಗಳೂರು ಜಿಲ್ಲಾ ಸಮಿತಿ ವತಿಯಿಂದ ಆನ್‍ಲೈನ್ ಮೂಲಕ ಕಾರ್ಮಿಕರ ಹಕ್ಕುಗಳ ಪರವಾಗಿ ಪ್ರಚಾರ ಮಾಡಲಾಯಿತು.

ದಿನದ ಕೂಲಿಯನ್ನೇ ನಂಬಿಕೊಂಡು ಬದುಕನ್ನು ಕಟ್ಟಿಕೊಂಡ ಕೂಲಿ ಕಾರ್ಮಿಕರು ಲಾಕ್‍ಡೌನ್‍ನಿಂದಾಗಿ ನಾನಾ ರೀತಿಯ ಸಮಸ್ಯೆಯ್ನು ಎದುರಿಸುತ್ತಿದ್ದಾರೆ. ಹೀಗಾಗಿ ವಲಸೆ ಕಾರ್ಮಿಕರು, ಬಡವರು, ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾದ ಪ್ರಯಾಣವನ್ನು ಖಾತ್ರಿ ಪಡಿಸಬೇಕು ಹಾಗೂ ಆಹಾರ ವಸತಿಯನ್ನು ಕಲ್ಪಿಸಬೇಕೆಂದು ಎಐಎಂಎಸ್‍ಎಸ್ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಶಾಂತಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News