ಜೂ.15ರಿಂದ ಮೀನುಗಾರಿಕೆ ನಿಷೇಧ; ಪರಿಷ್ಕೃತ ಆದೇಶ

Update: 2020-05-29 14:56 GMT

ಉಡುಪಿ, ಮೇ 29: ಕರ್ನಾಟಕ ಕರಾವಳಿ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಹಾಗೂ ಕರ್ನಾಟಕ ಸರಕಾರದ ಮೇ 29ರ ಅಧಿಸೂಚನೆಯಂತೆ, ಉಡುಪಿ ಜಿಲ್ಲೆಯನ್ನು ಒಳಗೊಂಡಂತೆ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮೂಲಕ ಹಾಗೂ 10 ಅಶ್ವಶಕ್ತಿ (ಎಚ್‌ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕಾ ಚಟುವಟಿಕೆಗಳಿಗೆ ನಿಷೇಧವನ್ನು ಪ್ರಸಕ್ತ ವರ್ಷಕ್ಕೆ ಮಾತ್ರ ಅನ್ವಯಿಸುವಂತೆ ಜೂನ್ 15ರಿಂದ ಜುಲೈ 31ರವರೆಗೆ (ಎರಡು ದಿನಗಳು ಸೇರಿ) ಒಟ್ಟು 47 ದಿನಗಳಿಗೆ ಪರಿಷ್ಕರಿಸಿ ಆದೇಶ ಹೊರಡಿಸಲಾಗಿದೆ.

ಅಲ್ಲದೇ ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಿಕ/ ನಾಡದೋಣಿಗಳು ಕರಾವಳಿಯಲ್ಲಿ ಮೀನುಗಾರಿೆ ನಡೆಸಲು ಅನುಮತಿ ನೀಡಲಾಗಿದೆ.

ಮೀನುಗಾರಿಕೆ ನಿಷೇಧಿಸಿದ ಸರಕಾರದ ಈ ಆದೇಶವನ್ನು ಉಲ್ಲಂಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾ ಗುವುದಲ್ಲದೇ ಒಂದು ವರ್ಷದ ಅವಧಿಗೆ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ. ಈ ಆದೇಶವನ್ನು ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರ ಹಿತದೃಷ್ಟಿಯನ್ನು ಗಮನದಲ್ಲಿಟ್ಟು ಕೊಂಡು ಹೊರಡಿಸಲಾಗಿ ರುವುದರಿಂದ ಎಲ್ಲಾ ಮೀನುಗಾರರು ಈ ಆದೇಶವನ್ನು ಪಾಲಿಸಿ ಸರಕಾರ ದೊಂದಿಗೆ ಸಹಕರಿಸುವಂತೆ ಉಡುಪಿ ಮೀನುಗಾರಿಕಾ ಇಲಾಖೆಯ ಉಪನಿದೇಶರ್ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News