ಶೈಕ್ಷಣಿಕ ವರ್ಷ ಆರಂಭದ ಬಗ್ಗೆ ಕೇಂದ್ರದ ಮಾರ್ಗಸೂಚಿ ಬಳಿಕ ನಿರ್ಧಾರ: ಶಿಕ್ಷಣ ಸಚಿವ ಸುರೇಶ್ ಕುಮಾರ್

Update: 2020-05-29 16:55 GMT

ಮೈಸೂರು,ಮೇ.29: ಈ ಬಾರಿಯ ಶೈಕ್ಷಣಿಕ ವರ್ಷ ಯಾವಾಗ ಪ್ರಾರಂಭ ಮಾಡಬೇಕು ಎಂದು ಚಿಂತಿಸಲಾಗುತ್ತಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ನೋಡಿಕೊಂಡು ನಂತರ ತೀರ್ಮಾನ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಎಸ್.ಸುರೇಶ್‍ ಕುಮಾರ್ ತಿಳಿಸಿದರು.

ಕೊರೋನ ಹಿನ್ನಲೆಯಲ್ಲಿ ನಮಗೆ ಅನಾನೂಕೂಲ ಉಂಟಾಗಿದೆ. ಪ್ರಕೃತಿಗೆ ವಿರುದ್ಧವಾಗಿ ನಡೆದುಕೊಳ್ಳಲು ಸಾಧ್ಯವಿಲ್ಲ, ಹಾಗಾಗಿ ಈ ಬಾರಿಯ ಶೈಕ್ಷಣಿಕ ವರ್ಷ ಆರಂಭ ಸ್ವಲ್ಪ ತಡವಾಗಬಹುದು ಎಂದು ಹೇಳಿದರು.

ಎಲ್‍ಕೆಜಿ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಲು ಸಾಧ್ಯವಿಲ್ಲ, ಇನ್ನೂ ಪೋಷಕರು ಆತಂಕದಲ್ಲಿದ್ದಾರೆ. ಹಾಗಾಗಿ ಎಲ್ಲರ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಶೈಕ್ಷಣಿಕ ವರ್ಷ ಆರಂಭದ ಬಗ್ಗೆ ಚಿಂತಿಸಲಾಗುತ್ತಿದೆ. ಜೊತೆಗೆ ಕೇಂದ್ರ ಸರ್ಕಾರದ ನಿಯಮ ಕೂಡ ಶಾಲೆಗಳ ಪ್ರಾರಂಭಕ್ಕೆ ಅವಕಾಶ ಕಲ್ಪಿಸಿಲ್ಲ. ಹಾಗಾಗಿ ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರ ನೋಡಿಕೊಂಡು ನಾವು ತೀರ್ಮಾನಿಸುತ್ತೇವೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News