ಕೊರೋನ ಸಂದರ್ಭದಲ್ಲಿ ಡಿನ್ನರ್ ಪಾಲಿಟಿಕ್ಸ್ ದುರಂತ: ಸಲೀಂ ಅಹ್ಮದ್

Update: 2020-05-29 17:29 GMT

ಉಡುಪಿ, ಮೇ 29: ಕೋವಿಡ್ -19 ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಶಕ್ತಿ ಕೊಡುವ ಕೆಲಸ ಮಾಡಬೇಕಾದ ಕೆಲವು ಬಿಜೆಪಿ ಶಾಸಕರು, ಡಿನ್ನರ್ ಪಾಲಿಟಿಕ್ಸ್ ಮಾಡಿ ಸರಕಾರಕ್ಕೆ ತೊಂದರೆ ಕೊಡುತ್ತಿರುವುದು ದುರಂತ. ಇವರು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ಸಚಿವ, ಚೇಯರ್‌ಮೆನ್ ಸ್ಥಾನಕ್ಕೆ ಒತ್ತಡ ಹಾಕುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಟೀಕಿಸಿದ್ದಾರೆ.

ಉಡುಪಿ ಕಾಂಗ್ರೆಸ್ ಭವನದಲ್ಲಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಈ ಮಧ್ಯೆ ಕಾಂಗ್ರೆಸ್‌ನ ಶಾಸಕರು ಬಿಜೆಪಿಗೆ ಸೇರ್ಪಡೆಯಾಗು ತ್ತಾರೆ ಎಂಬ ರಮೇಶ್ ಜಾರಕಿಹೋಳಿ ಹೇಳಿಕೆಗೆ ನಗಬೇಕೋ ಏನು ಮಾಡ ಬೇಕು ಎಂಬುದು ಗೊತ್ತಾಗುತ್ತಿಲ್ಲ ಎಂದರು.

ಕೊರೋನ ನಿಯಂತ್ರಿಸುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ. ಇಂದು ಮುಖ್ಯಮಂತ್ರಿ ಹಾಗೂ ಸಚಿವರ ಮಧ್ಯೆ ಹೊಂದಾಣಿಕೆ ಇಲ್ಲವಾಗಿದೆ. ಭ್ರಷ್ಟಾ ಚಾರ ತಾಂಡವಾಡುತ್ತಿದೆ. ಹಲವಾರು ಹಗರಣಗಳಲ್ಲಿ ಸಚಿವರು ಭಾಗಿಗಳಾ ಗಿದ್ದಾರೆ ಎಂದು ದೂರಿದ ಅವರು, ಮೋದಿ ಘೋಷಣೆ ಮಾಡಿರುವ 21ಲಕ್ಷ ಕೋಟಿ ರೂ. ಅನುದಾನ ದೊಡ್ಡ ಬೋಗಸ್ ಆಗಿದೆ ಎಂದು ದೂರಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಯು.ಆರ್.ಸಭಾಪತಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಉಸ್ತುವಾರಿ ಮಂಜುನಾಥ್ ಭಂಡಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಫೂರ್, ಮುಖಂಡರಾದ ಜಿ.ಎ.ಬಾವಾ, ಟಿ.ಎಂ.ಶರೀಫ್ ಉಪಸ್ಥಿತರಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News