ಬಾಲಕನ ಮೇಲೆ ಹಲ್ಲೆ ಪ್ರಕರಣ: ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಎಸ್ಸೆಸ್ಸೆಫ್ ವಿಟ್ಲ ಡಿವಿಷನ್ ಆಗ್ರಹ

Update: 2020-05-30 05:41 GMT

ವಿಟ್ಲ, ಮೇ 30: ಸಾಲೆತ್ತೂರು ಸಮೀಪದ ಕಾಡುಮಠ ಎಂಬಲ್ಲಿ ನಡೆದ ಅಪ್ರಾಪ್ತ ವಯಸ್ಸಿನ ಬಾಲಕನ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಆರೋಪಿಗಳನ್ನೂ ಕೂಡಲೇ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಜರಗಿಸುವಂತೆ ಎಸ್ಸೆಸ್ಸೆಫ್ ವಿಟ್ಲ ಡಿವಿಷನ್ ಸಮಿತಿ ಆಗ್ರಹಿಸಿದೆ.

ಪ್ರಕರಣದ ಪ್ರಮುಖ ಆರೋಪಿ ಸಂಘ ಪರಿವಾರದ ಮುಖಂಡ ದಿನೇಶ್ ಈ ಹಿಂದೆ ಹಲವು ಪ್ರಕರಣದಲ್ಲಿ ಭಾಗಿಯಾಗಿದ್ದು ಅಮಾಯಕ ವಿದ್ಯಾರ್ಥಿಗಳನ್ನು ಬಳಸಿಕೊಂಡು ನಕಲಿ ಖಾತೆಗಳ ಮೂಲಕ ಒಂದು ಧರ್ಮದ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಅವರ ಮೇಲೆ ಹಲ್ಲೆ ನಡೆಸಿ, ಬೆದರಿಕೆಯೊಡ್ಡಿ, ದರೋಡೆ ಕೃತ್ಯ ನಡೆಸುವ ಬಗ್ಗೆ ಮಾಹಿತಿ ಇದ್ದು, ಕೃತ್ಯದಲ್ಲಿ ಜಾತಿ ನಿಂದನೆಗೈದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಕೋಮು ಸಾಮರಸ್ಯಕ್ಕೆ ದಕ್ಕೆಯಾಗುವ ರೀತಿಯ ವಿಡಿಯೋಗಳನ್ನು ವೈರಲ್ ಮಾಡಿ ತೆರೆಮರೆಯಲ್ಲಿ ಕುಳಿತು ವಿಘ್ನ ಸಂತೋಷ ಪಡುವ ಇಂತಹ ಕೃತ್ಯ ಖಂಡನೀಯ, ಆದ್ದರಿಂದ ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ, ಸಂಭಂದಪಟ್ಟ ಅಧಿಕಾರಿಗಳು ಸತ್ಯಾಸತ್ಯತೆಯನ್ನು ಬಯಲುಗೊಳಿಸುವಂತೆ ಎಸ್ಸೆಸ್ಸೆಫ್ ವಿಟ್ಲ ಡಿವಿಷನ್ ಸಮಿತಿ ಪ್ರಕಟನೆಯಲ್ಲಿ ಒತ್ತಾಯಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News