ಒಂದು ವರ್ಷ ಪೂರೈಸಿದ ಕೇಂದ್ರ ಸರಕಾರ: ದೇಶದ ಜನರಿಗೆ ಪತ್ರ ಬರೆದ ಪ್ರಧಾನಿ

Update: 2020-05-30 06:19 GMT

ಹೊಸದಿಲ್ಲಿ, ಮೇ 30: ಪ್ರಧಾನಮಂತ್ರಿ ನರೇಂದ್ರ ಮೋದಿ ಎರಡನೇ ಅವಧಿಗೆ ಕೇಂದ್ರದಲ್ಲಿ ಅಧಿಕಾರ ಏರಿ ಇಂದಿಗೆ ಒಂದು ವರ್ಷ ಪೂರೈಸಿದ್ದು, ಈ ಹಿನ್ನೆಲೆಯಲ್ಲಿ ದೇಶದ ಜನರನ್ನು ಉದ್ದೇಶಿಸಿ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ತನ್ನ ಸರಕಾರ ಕಳೆದ ಒಂದು ವರ್ಷದಲ್ಲಿ ಜಾರಿಗೆ ತಂದ ಯೋಜನೆಗಳು, ತೆಗದುಕೊಂಡಿರುವ ಐತಿಹಾಸಿಕ ನಿರ್ಧಾರಗಳು, ಸಾಧನೆಗಳು,ವಲಸಿಗ ಕಾರ್ಮಿಕರ ಸಮಸ್ಯೆ ಹಾಗೂ ಕೊರೋನ ವೈರಸ್ ಸಾಂಕ್ರಾಮಿಕ ವೈರಸ್ ವಿರುದ್ಧ ಹೋರಾಟ, ವೈರಸ್‌ನಿಂದಾಗಿ ವಲಸಿಗ ಕಾರ್ಮಿಕರು ಹಾಗೂ ಇತರರು ಎದುರಿಸುತ್ತಿರುವ ಗಂಭೀರ ಸಮಸ್ಯೆಯನ್ನು ಉಲ್ಲೇಖಿಸಿದ್ದಾರೆ.

 ನಾನು ಮತ್ತೊಮ್ಮೆ 130 ಕೋಟಿ ಜನರಿಗೆ ಹಾಗೂ ಪ್ರಜಾಪ್ರಭುತ್ವ ಮೌಲ್ಯಗಳಿಗೆ ನಮಿಸುತ್ತೇನೆ.ಸಾಮಾನ್ಯ ದಿನಗಳಲ್ಲಾದರೆ ನಾನು ನಿಮ್ಮ ನಡುವೆ ಇರುತ್ತಿದ್ದೆ. ಆದರೆ ಸದ್ಯದ ಪರಿಸ್ಥಿತಿ ಅದಕ್ಕೆ ಅವಕಾಶ ನೀಡುತ್ತಿಲ್ಲ. ಹೀಗಾಗಿ ಪತ್ರದ ಮೂಲಕ ನಿಮ್ಮ ಆಶೀರ್ವಾದ ಕೇಳುತ್ತಿದ್ದೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ.

ಭ್ರಷ್ಟಾಚಾರ ವಿರುದ್ಧ ಸರಕಾರ ಕೈಗೊಂಡಿವ ಕ್ರಮಗಳನ್ನು,ಮೊದಲ ಅವಧಿಯಲ್ಲಿ ಸರಕಾರ ಕೈಗೊಂಡಿರುವ ನಿರ್ಧಾರ ಹಾಗೂ ನಿರ್ದಿಷ್ಟ ದಾಳಿ ಇತರ ವಿಚಾರಗಳನ್ನು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕೊರೋನ ಹಿನ್ನೆಲೆಯಲ್ಲಿ ಘೋಷಿಸಲಾಗಿರುವ ಲಾಕ್‌ಡೌನ್‌ನಿಂದಾಗಿ ದೇಶದ ಆರ್ಥಿಕ ಚಟುವಟಿಕೆ ಮೇಲಾದ ಪರಿಣಾಮವನ್ನು ಗಮನದಲ್ಲಿಟ್ಟುಕೊಂಡು 20 ಲಕ್ಷ ಕೋಟಿ ರೂ. ವಿಶೇಷ ಆರ್ಥಿಕ ಪ್ಯಾಕೇಜ್‌ನ್ನು ಘೋಷಿಸಿರುವುದನ್ನು ಮೋದಿ ಉಲ್ಲೇಖಿಸಿದ್ದಾರೆ.ಈ ಪ್ಯಾಕೇಜ್ ದೇಶವನ್ನು ಸ್ವಾವಲಂಬಿಯನ್ನಾಗಿಸಲು ನೆರವಾಗಲಿದೆ ಎಂದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News