ಜರ್ಮನಿಯ ಫ್ರಾಂಕ್‍ಫರ್ಟ್ ನಿಂದ ಬೆಂಗಳೂರಿಗೆ ಬಂದಿಳಿದ 248 ಅನಿವಾಸಿ ಭಾರತಿಯರು

Update: 2020-05-30 16:21 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ 30: ಜರ್ಮನಿಯ ಫ್ರಾಂಕ್‍ಫರ್ಟ್ ನಿಂದ ಶನಿವಾರ ಮಧ್ಯಾಹ್ನ ದೇವನಹಳ್ಳಿಯ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 24ನೇ ಏರ್ ಇಂಡಿಯಾ ವಿಮಾನದಲ್ಲಿ 248 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.

ವಿಮಾನ ನಿಲ್ದಾಣಕ್ಕೆ ಬಂದಿಳಿದ ಒಟ್ಟು 248 ಮಂದಿ ಪ್ರಯಾಣಿಕರಲ್ಲಿ ಒಂದು ಮಗು ಸೇರಿದಂತೆ 159 ಪುರುಷರು ಮತ್ತು 89 ಮಹಿಳೆಯರು ಇದ್ದಾರೆ. ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು ಎಲ್ಲಾ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೋನ ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ. ಪ್ರಯಾಣಿಕರೆಲ್ಲರನ್ನು 14 ದಿನಗಳ ಕ್ವಾರಂಟೈನ್‍ಗಾಗಿ ಹೊಟೇಲ್‍ಗಳಿಗೆ ಕಳುಹಿಸಿಕೊಡಲಾಗಿದೆ ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News