×
Ad

ಅನೈತಿಕ ಸಂಬಂಧ ಶಂಕೆ: ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಯುವಕನ ಕೊಲೆ

Update: 2020-05-30 22:09 IST

ಬೆಂಗಳೂರು, ಮೇ 30: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದಿರುವ ಘಟನೆ ಇಲ್ಲಿನ ಡಿಜೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸುಭಾನ್(30) ಎಂಬಾತ ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ.

ಡಿಜೆ ಹಳ್ಳಿಯ ಶ್ಯಾಂಪುರ ರೈಲ್ವೆ ಗೇಟ್ ಬಳಿ ಸುಭಾನ್ ಶವ ಪತ್ತೆಯಾಗಿದ್ದು, ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆಗೈದಿದ್ದಾರೆ ಎಂದು ತಿಳಿದುಬಂದಿದೆ. ಅನೈತಿಕ ಸಂಬಂಧ ವಿಚಾರಕ್ಕೆ ತಬ್ರೇಝ್ ಎಂಬಾತನೊಂದಿಗೆ ಸುಭಾನ್ ಗಲಾಟೆ ಮಾಡಿಕೊಂಡಿದ್ದು, ಹಳೇ ದ್ವೇಷದ ಹಿನ್ನೆಲೆ ಈ ಕೃತ್ಯವೆಸಗಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಡಿಜೆಹಳ್ಳಿ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News