ವಾಯುಭಾರ ಕುಸಿತ: ಜೂ.4ರವರೆಗೆ ಮೀನುಗಾರಿಕೆ ನಡೆಸದಂತೆ ಸೂಚನೆ

Update: 2020-05-30 17:36 GMT

ಮಂಗಳೂರು, ಮೇ 30: ರಾಜ್ಯ ಮೀನುಗಾರಿಕೆ ನಿರ್ದೇಶಕರು ಮತ್ತು ಮಂಗಳೂರು ಕೋಸ್ಟ್‌ಗಾಡ್ ಅಧಿಕಾರಿಗಳು ನೀಡಿದ ಹವಾಮಾನ ಮುನ್ಸೂಚನೆಯಂತೆ ಮೇ 31ರಿಂದ ಜೂ.4ರವರೆಗೆ ಅರಬ್ಬಿ ಸಮುದ್ರದ ಆಗ್ನೇಯ ಮತ್ತು ಅದರ ಸುತ್ತಮುತ್ತಲಿನ ಪ್ರದೇಶದಲ್ಲಿ ವಾಯುಭಾರ ಕುಸಿತವಾಗುವ ಸಂಭವವಿರುತ್ತದೆ. ಇದರಿಂದ ಸಮುದ್ರವು ಪ್ರಕ್ಷುಬ್ಧವಾಗುವ ಸಾಧ್ಯತೆ ಇದೆ.

ಹಾಗಾಗಿ ಸಂಭಾವ್ಯ ಅನಾಹುತವನ್ನು ತಡೆಯುವ ಸಲುವಾಗಿ ಮೀನುಗಾರಿಕೆಗೆ ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕಾ ದೋಣಿಗಳು ಕೂಡಲೇ ದಡ ಸೇರುವಂತೆ ಎಲ್ಲಾ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ದ.ಕ.ಜಿಲ್ಲಾ ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News