‘ಸಾರ್ವಜನಿಕ ಪ್ರದೇಶದಲ್ಲಿ ಉಗುಳುವುದು ಶಿಕ್ಷಾರ್ಹ ಅಪರಾಧ’

Update: 2020-05-30 17:38 GMT

ಮಂಗಳೂರು, ಮೇ 30: ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದ.ಕ. ಜಿಲ್ಲಾ ಶಾಖೆಯ ವತಿಯಿಂದ ವಿಶ್ವ ತಂಬಾಕು ರಹಿತ ದಿನವನ್ನು ಶನಿವಾರ ಜಿಲ್ಲಾಧಿಕಾರಿಯ ಕಚೇರಿಯಲ್ಲಿ ಆಚರಿಸಲಾಯಿತು. ಈ ಸಂದರ್ಭ ‘ನಮಗಾಗಿ ಉಗುಳಬೇಡಿ’ ಎಂದು ವಿನಂತಿಸುವ ಮಕ್ಕಳೊಂದಿಗಿನ ಪೋಸ್ಟರ್‌ ಗಳನ್ನು ಹಾಗೂ ಆಟೋ ರಿಕ್ಷಾಗಳಲ್ಲಿ ಮತ್ತು ಬಸ್‌ಗಳಲ್ಲಿ ಪ್ರದರ್ಶಿಸಲು ‘ಉಗುಳುವುದು ಶಿಕ್ಷಾರ್ಹ ಅಪರಾಧ’ ಎಂಬ ಸ್ಟಿಕ್ಕರ್‌ಗಳನ್ನು ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪಾ ಬಿಡುಗಡೆ ಮಾಡಿದರು.

ಬಳಿಕ ಮಾತನಾಡಿದ ಅವರು ದ.ಕ. ರೆಡ್‌ಕ್ರಾಸ್ ಪರಿಣಾಮಕಾರಿ ಚಟುವಟಿಕೆಗಳನ್ನು ಮಾಡುತ್ತಿದೆ. ಕೊರೋನ ಸಂದರ್ಭವೂ ಕೂಡ ವಿಶ್ವ ತಂಬಾಕು ರಹಿತ ದಿನವನ್ನು ಅತ್ಯಂತ ಆಕರ್ಷಣೀಯ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಉಗುಳುವುದರ ವಿರುದ್ಧ ಜಾಗೃತಿ ಮೂಡಿಸುತ್ತಿ ರುವ ಬಗ್ಗೆ ಜಿಲ್ಲಾಡಳಿತ ಸಂಪೂರ್ಣವಾಗಿ ಬೆಂಬಲಿಸಲಿದೆ ಎಂದು ಸ್ಪಷ್ಟಪಡಿಸಿದರು.

ದ.ಕ. ಜಿಲ್ಲಾ ರೆಡ್‌ಕ್ರಾಸ್ ಅಧ್ಯಕ್ಷ ಸಿಎ. ಶಾಂತರಾಮ ಶೆಟ್ಟಿ, ಐಎಎಸ್ ಅಧಿಕಾರಿ ರಾಹುಲ್ ಶಿಂಧೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News