ಹಿರಸಾವೆ ಬ್ಲಾಕ್ ಉಸ್ತುವಾರಿಯಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಹಬೀಬ್ ಅಲಿ ಆಯ್ಕೆ
Update: 2020-05-30 23:40 IST
ಉಡುಪಿ, ಮೇ 30: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಹಿರಸಾವೆ ಬ್ಲಾಕ್ ಉಸ್ತುವಾರಿಯಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಹಬೀಬ್ ಅಲಿ ಅವರನ್ನು ಡಿ.ಕೆ. ಶಿವಕುಮಾರ್ ನೇಮಕ ಮಾಡಿದ್ದಾರೆ.
ಹಬೀಬ್ ಅಲಿ ಅವರು ಎನ್.ಎಸ್.ಯು.ಐ ಕಾರ್ಯಕರ್ತನಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ನಂತರ ಉಡುಪಿ ಜಿಲ್ಲಾ ಎನ್ ಎಸ್ ಯು ಐ ಉಪಾಧ್ಯಕ್ಷರಾಗಿ ನಂತರ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಮತ್ತು ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಹಬೀಬ್ ಅಲಿ ಅವರು ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.