ಜಪ್ಪಿನಮೊಗರು ಸಮೀಪ ಅಪಘಾತ: ಓರ್ವ ಮೃತ್ಯು; ಹಲವರಿಗೆ ಗಾಯ

Update: 2020-05-31 04:44 GMT

ಮಂಗಳೂರು, ಮೇ 31: ರಾ.ಹೆ.66ರ ಜಪ್ಪಿನಮೊಗರು ಸಮೀಪ ರವಿವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಬ್ಬ ಮೃತಪಟ್ಟು ಹಲವು ಮಂದಿ ಗಾಯಗೊಂಡ ಘಟನೆ ನಡೆದಿದೆ. 

ಮೃತವ್ಯಕ್ತಿ ಮತ್ತು ಗಾಯಾಳುಗಳ ಹೆಸರು ತಿಳಿದು ಬಂದಿಲ್ಲ. ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ಜಪ್ಪಿನಮೊಗರು ಸಮೀಪ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದಿದೆ. ಇದರಿಂದ ಕಾರು ಲಾರಿಯಡಿ ಸಿಲುಕಿದ್ದು, ಒಬ್ಬರು ಸ್ಥಳದಲ್ಲೇ ಮೃತಪಟ್ಟರು ಮತ್ತು ಗಾಯಾಳು ಗಳನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿರುವ ಇಲ್ಲಿನ ಠಾಣೆ ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News