ಹೆಬ್ರಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿ ಉಮರ್ ಫಾರೂಕ್ ಫರಂಗಿಪೇಟೆ ನೇಮಕ

Update: 2020-05-31 13:57 GMT

ಮಂಗಳೂರು, ಮೇ 31: ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಅಗಿರುವ ಉಮರ್ ಫಾರೂಕ್ ಫರಂಗಿಪೇಟೆ ಅವರನ್ನು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಸ್ತುವಾರಿಯಾಗಿ ನೇಮಿಸಿ ಕೆಪಿಸಿಸಿ ಅದೇಶ ಹೊರಡಿಸಿದೆ. 

ಪಕ್ಷವನ್ನು ಬೂತ್ ಮಟ್ಟದಲ್ಲಿ ಬಲಪಡಿಸುವ ಉದ್ದೇಶದಿಂದ ರಾಜ್ಯದ ಪ್ರತಿ ಬ್ಲಾಕ್ ಕಾಂಗ್ರೆಸ್ ಸಮಿತಿಗೆ ಉಸ್ತುವಾರಿಗಳನ್ನು ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆದೇಶ ಹೊರಡಿಸಿದ್ದು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿ ಉಮರ್ ಫಾರೂಕ್ ಫರಂಗಿಪೇಟೆ ನೇಮಕ ಆಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News