ಭಾರೀ ಮಳೆ ಸಾಧ್ಯತೆ: ಕೊಡಗಿನಲ್ಲಿ ಆರೆಂಜ್ ಅಲರ್ಟ್ ಘೋಷಣೆ

Update: 2020-05-31 14:44 GMT

ಮಡಿಕೇರಿ, ಮೇ.31: ಪೂರ್ವ ಮಧ್ಯ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಕೊಡಗು ಜಿಲ್ಲೆಯಲ್ಲೂ ಭಾರೀ ಗಾಳಿ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಮೇ.31(ಇಂದು) ಮತ್ತು ಜೂ.1 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ. 

ಮೇ 31 ಹಾಗೂ ಜೂನ್ 1 ರವರೆಗೆ ಜಿಲ್ಲೆಯ ಒಳನಾಡು ಪ್ರದೇಶಗಳಲ್ಲಿ ಚದುರಿದಂತೆ ಹಾಗೂ ಗಾಳಿ ಸಹಿತ 115.60 ಮಿ.ಮೀ ನಿಂದ 204.4 ಮಿ.ಮೀಟರ್ ನಷ್ಟು ವ್ಯಾಪಕ ಭಾರೀ ಮಳೆ ಆಗುವ ಸಾಧ್ಯತೆಗಳು ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News