ಮುನ್ಸೂಚನೆ ನೀಡದೆ ಡ್ಯಾಮ್‍ಗಳಿಂದ ನೀರು ಬಿಡುವ ವಿಚಾರ: ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ

Update: 2020-05-31 15:25 GMT

ಬೆಂಗಳೂರು, ಮೇ 31: ಮಳೆಗಾಲ ಹಾಗೂ ಪ್ರವಾಹದ ಸಂದರ್ಭದಲ್ಲಿ ಡ್ಯಾಮ್‍ಗಳಿಂದ ನೀರನ್ನು ಹೊರಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ಮಳೆಗಾಲ ಹೆಚ್ಚಾಗಿ ಪ್ರವಾಹ ಉಂಟಾದಾಗ ಡ್ಯಾಮ್‍ ಗಳಿಂದ ನೀರನ್ನು ಹೊರ ಬಿಡುವ ಮೊದಲು ನೀರು ಹರಿದು ಹೋಗುವ ರಾಜ್ಯಗಳಿಗೆ ಕಡ್ಡಾಯವಾಗಿ ಮಾಹಿತಿ ನೀಡುವಂತೆ ಎಲ್ಲ ರಾಜ್ಯಗಳಿಗೆ ಸೂಚನೆ ನೀಡಲು ಕೇಂದ್ರ ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಅರ್ಜಿ ಸಲ್ಲಿಸಲಾಗಿದೆ. ತುಮಕೂರಿನ ಚೇಳೂರು ಗ್ರಾಮದ ಎ.ಮಲ್ಲಿಕಾರ್ಜುನ ಎಂಬುವರು ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿಯಲ್ಲಿ ಕೇಂದ್ರ ಗೃಹ ಸಚಿವಾಲಯ, ಅರಣ್ಯ ಮತ್ತು ಪರಿಸರ ಸಚಿವಾಲಯ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಭಾರತೀಯ ಹವಾಮಾನ ಇಲಾಖೆ, ಜಲಶಕ್ತಿ ಸಚಿವಾಲಯ ಮತ್ತು ರಾಜ್ಯ ಸರಕಾರವನ್ನು ಪ್ರತಿವಾದಿಯಾಗಿ ಮಾಡಲಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News