ರಾಯಚೂರು: ಒಂದೇ ದಿನದಲ್ಲಿ 83 ಜನರಿಗೆ ಕೊರೋನ ಸೋಂಕು ದೃಢ

Update: 2020-05-31 17:53 GMT

ರಾಯಚೂರು, ಮೇ 31: ರಾಜ್ಯ ಆರೋಗ್ಯ ಇಲಾಖೆಯಿಂದ ರವಿವಾರ ಪ್ರಕಟಿಸಿರುವ ವರದಿ ಪ್ರಕಾರ ಜಿಲ್ಲೆಯಲ್ಲಿ ಒಂದೇ ದಿನ 83 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಸಂಖ್ಯೆ ದಿಢೀರ್ 217ಕ್ಕೆ ಏರಿಕೆಯಾಗಿದೆ.

ಕೊರೋನ ಸೋಂಕಿನಿಂದ ಗುಣಮುಖರಾಗಿದ್ದ 34 ಜನರನ್ನು ಒಪೆಕ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು. ಇದ್ದಕ್ಕಿದ್ದಂತೆ ಮೂರು ಪಟ್ಟು ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಎಲ್ಲರನ್ನು ಒಪೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊರೋನದಿಂದ ಜಿಲ್ಲೆಯಲ್ಲಿ ಕಳೆದ ಶುಕ್ರವಾರ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಸದ್ಯ 182 ಜನರು ಆಸ್ಪತ್ರೆಯಲ್ಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News