ಬಜ್ಪೆ : ಮೂವರು ಯುವಕರ ಮೇಲೆ ತಂಡದಿಂದ ಹಲ್ಲೆ; ಓರ್ವ ಮೃತ್ಯು

Update: 2020-06-01 06:29 GMT

ಬಜ್ಪೆ : ತಂಡವೊಂದು ಮೂವರು ಯುವಕರ ಮೇಲೆ ದಾಳಿ ನಡೆಸಿ ಓರ್ವ ಸಾವನ್ನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಟೀಲು ಸಮೀಪದ ದೇವರಗುಡ್ಡೆ ಎಂಬಲ್ಲಿ ರವಿವಾರ ರಾತ್ರಿ ನಡೆದಿದೆ.

ಮೃತ ಯುವಕನನ್ನು ಕಿರ್ತನ್ (20) ಎಂದು ಗುರುತಿಸಲಾಗಿದೆ. ನಿತಿನ್ (20), ಮಣೇಶ್ (20) ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News