ಪರಿಸ್ಥಿತಿಗಳನ್ನು ಬಳಸಿಕೊಂಡು ಬೆದರಿಕೆ ಹಾಕುತ್ತಿರುವ ಚೀನಾ: ಮೈಕ್ ಪಾಂಪಿಯೊ ಆರೋಪ

Update: 2020-06-01 14:50 GMT

ವಾಶಿಂಗ್ಟನ್, ಜೂ. 1: ಚೀನಾವು ತುಂಬಾ ಸಮಯದಿಂದಲೂ, ಲಭ್ಯವಿರುವ ಪರಿಸ್ಥಿತಿಗಳನ್ನು ತನ್ನ ಉಪಯೋಗಕ್ಕೆ ಬಳಸಿಕೊಂಡು ಇತರ ದೇಶಗಳಿಗೆ ಬೆದರಿಕೆಗಳನ್ನು ಹಾಕುತ್ತಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೊ ರವಿವಾರ ಹೇಳಿದ್ದಾರೆ. ಈಗ ಭಾರತದ ಗಡಿಯಲ್ಲಿ ನೆಲೆಸಿರುವ ಪರಿಸ್ಥಿತಿಯನ್ನು ಬಳಸಿಕೊಂಡು ಭಾರತಕ್ಕೆ ಬೆದರಿಕೆ ಹಾಕಲು ಯತ್ನಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಅವರು ‘ಫಾಕ್ಸ್ ನ್ಯೂಸ್’ಗೆ ನೀಡಿದ ಸಂದರ್ಶನವೊಂದರಲ್ಲಿ, ಭಾರತ-ಚೀನಾ ಗಡಿ ಮತ್ತು ದಕ್ಷಿಣ ಚೀನಾ ಸಮುದ್ರದಲ್ಲಿ ಚೀನಾದ ಆಕ್ರಮಣಕಾರಿ ವರ್ತನೆಯ ಬಗ್ಗೆ ಕೇಳಲಾದ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಿದ್ದರು. ಚೀನಾ ಒಡ್ಡಿರುವ ಬೆದರಿಕೆಯು ನೈಜವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

‘‘ಚೀನಾದ ಕಮ್ಯುನಿಸ್ಟ್ ಪಕ್ಷವು ತುಂಬಾ ಸಮಯದಿಂದ ಇಂಥ ಪ್ರಯತ್ನಗಳನ್ನು ಮಾಡುತ್ತಿದೆ. ಸೃಷ್ಟಿಯಾಗುವ ಯಾವುದೇ ಪರಿಸ್ಥಿತಿಯನ್ನು ಅದು ತನ್ನ ಉಪಯೋಗಕ್ಕೆ ಬಳಸಿಕೊಳ್ಳುತ್ತದೆ. ಹಾಗೂ ಆ ಮೂಲಕ ಬೇರೆ ದೇಶಗಳಿಗೆ ಬೆದರಿಕೆಗಳನ್ನು ಹಾಕುತ್ತಿದೆ. ಇದು ತುಂಬಾ ಸಮಯದಿಂದ ನಡೆಯುತ್ತಾ ಬಂದಿದೆ’’ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News