ಉಡುಪಿ : ಜೂ.4ರಿಂದ ಎಪಿಎಂಸಿ ಮಾರುಕಟ್ಟೆಯಲ್ಲಿ ಮಾತ್ರ ತರಕಾರಿ ಮಾರಾಟಕ್ಕೆ ಅವಕಾಶ

Update: 2020-06-01 15:32 GMT

ಉಡುಪಿ, ಜೂ.1: ಆದಿಉಡುಪಿಯಲ್ಲಿರುವ ಎಪಿಎಂಸಿ ಮಾರುಕಟ್ಟೆಯಲ್ಲಿ ಜೂ.4ರಿಂದ ಪ್ರತಿದಿನ ತರಕಾರಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಇದರ ಹೊರತಾಗಿ ನಗರದ ಇತರ ಕಡೆ ಬೀದಿಬದಿಯಲ್ಲಿ ತರಕಾರಿ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ನಗರಸಭೆ ಸಜ್ಜಾಗಿದೆ.

ಈ ಹಿನ್ನೆಲೆಯಲ್ಲಿ ಇಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ಇತರ ಅಧಿಕಾರಿಗಳೊಂದಿಗೆ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. 15 ದಿನಗಳೊಳಗೆ ತರಕಾರಿ ವ್ಯಾಪಾರಿಗಳಿಗೆ ಮಾರಾಟಕ್ಕೆ ಅನು ಕೂಲವಾಗುವಂತೆ ಶೆಡ್ ವ್ಯವಸ್ಥೆ ಮಾಡಲಾಗು ವುದು ಎಂದು ಎಪಿಎಂಸಿ ಅ್ಯಕ್ಷ ಕೆ.ಪ್ರಸಾದ್ ಭಟ್ ತಿಳಿಸಿದರು.

ಈ ಮೊದಲು ಎಪಿಎಂಸಿ ಮಾರುಕಟ್ಟೆಯಲ್ಲಿ ವಾರದಲ್ಲಿ ಬುಧವಾರದ ಮಾತ್ರ ತರಕಾರಿ ವ್ಯಾಪಾರಕ್ಕೆ ಅನುಮತಿ ನೀಡಲಾಗಿತ್ತು. ಪ್ರಸ್ತುತ ಅಂಬಾ ಗಿಲು, ಬೀಡಿನಗುಡ್ಡೆಯಲ್ಲಿ ತರಕಾರಿ ವ್ಯಾಪಾರ ಮಾಡುವವರಿಗೆ ಯಾವುದೇ ಮೂಲಭೂತ ವ್ಯವಸ್ಥೆ ಇಲ್ಲದ ಕಾರಣ ಅವರಿಗೆ ಎಪಿಎಂಸಿಯಲ್ಲಿ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ.

ಅದರಂತೆ ಜೂ.4ರಿಂದ ಅಂಬಾಗಿಲು, ಬೀಡಿನಗುಡ್ಡೆ ಭಾಗದ ಬೀದಿಗಳಲ್ಲಿ ತರಕಾರಿ ವ್ಯಾಪಾರ ಮಾಡುತ್ತಿರುವವರನ್ನು ಮತ್ತು ರಖಂ ವ್ಯಾಪಾರಿಗಳನ್ನು ಎಪಿಎಂಸಿ ಮಾರುಕಟ್ಟೆಗೆ ಸ್ಥಳಾಂತರಿಸಿ, ಇಲ್ಲಿಯೇ ದಿನನಿತ್ಯದ ವ್ಯಾಪಾರಕ್ಕೆ ಅನು ಮತಿಯನ್ನು ನೀಡಲಾಗಿದೆ ಎಂದು ನಗರಸಭೆ ಪೌರಾಯುಕ್ತ ಆನಂದ್ ಸಿ.ಕಲ್ಲೋ ಲಿಕರ್ ತಿಳಿಸಿದ್ದಾರೆ.

ಇನ್ನು ಮುಂದೆ ತರಕಾರಿ ವ್ಯಾಪಾರಸ್ಥರು ನಗರದ ಬೀದಿಬದಿಯಲ್ಲಿ ವ್ಯಾಪಾರ ಮಾಡುವಂತೆ ಇಲ್ಲ. ಎಲ್ಲರೂ ಎಪಿಎಂಸಿಯಲ್ಲಿಯೇ ತರಕಾರಿ ಮಾರಾಟ ಮಾಡಬೇಕು. ಅದರ ಹೊರತಾಗಿ ಇತರ ಕಡೆ ಬೀದಿಬದಿಯಲ್ಲಿ ವ್ಯಾಪಾರ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸ ಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ ಮೋಹನ್‌ರಾಜ್, ಪೊಲೀಸ್ ವೃತ್ತ ನಿರೀಕ್ಷಕ ಮಂಜುನಾಥ್, ಉಡುಪಿ ನಗರ ಠಾಣೆಯ ಉಪ ನಿರೀಕ್ಷಕ ಶಕ್ತಿವೇಲು, ಸಂಚಾರ ಪೊಲೀಸ್ ಉಪನಿರೀಕ್ಷಕ ಅಬ್ದುಲ್ ಖಾದರ್, ಎಪಿಎಂಸಿ ಅಧ್ಯಕ್ಷ ಕೆ.ಪ್ರಸಾದ್ ಭಟ್, ಕಾರ್ಯದರ್ಶಿ ಗಾಯತ್ರಿ, ವರ್ತಕರಾದ ವಿಠ್ಠಲ್ ಪೈ, ಹರೀಶ್‌ರಾಮ್ ಬನ್ನಂಜೆ ಮೊದ ಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News