ಹನೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿದ್ಯುತ್ ಪ್ರಸರಣ ನಿಗಮದ ನೌಕರರ ಧರಣಿ

Update: 2020-06-01 18:27 GMT

ಹನೂರು, ಜೂ.1: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಬೆಳಗ್ಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರು ಪ್ರತಿಭಟನೆ ನಡೆಸಿದರು.

ಪಟ್ಟಣದ ಸೆಸ್ಕ್ ಕಚೇರಿ ಎದುರು ಜಮಾಯಿಸಿದ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರು ಕೈಗೆ ಕಪ್ಪು ಪಟ್ಟಿ ಧರಿಸಿ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.

ಕೇಂದ್ರ ಸರ್ಕಾರ 2003ರ ವಿದ್ಯುತ್ ಕಾಯ್ದೆಗೆ ಪ್ರಸ್ತಾಪಿತ ತಿದ್ದುಪಡಿ ತರಲು ಹೊರಟಿರುವುದು, ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡುತ್ತಿರುವುದು ಕಾರ್ಮಿಕ ವಿರೋಧಿ ನೀತಿಯಾಗಿದೆ. ಕೇಂದ್ರ ಸರ್ಕಾರ ಕೂಡಲೇ ಈ ಎಲ್ಲ ಕ್ರಮಗಳನ್ನು ಕೈಬಿಟ್ಟು ಕಾರ್ಮಿಕರ ಪರವಾಗಿ ಕಾರ್ಯನಿರ್ವಹಿಸಲಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎಇಇ ಶಂಕರ್, ಎಇ ರಂಗಸ್ವಾಮೀ, ಯೂನಿಯನ್ ಕಾರ್ಯದರ್ಶಿ ರಿಯಾಝ್ ಸೇರಿದಂತೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News