ಬೆಂಗಳೂರಿನಲ್ಲಿ ಕಂಟೈನ್ಮೆಂಟ್ ಝೋನ್ ಗಳ ಸಂಖ್ಯೆ 36ಕ್ಕೆ ಏರಿಕೆ

Update: 2020-06-01 18:36 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.1: ನಗರದಲ್ಲಿ ಲಾಕ್‍ಡೌನ್ ಸಡಿಲಿಕೆ ನಂತರ ಕೊರೋನ ಸೋಂಕಿತರ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 36ಕ್ಕೆ ಏರಿಕೆಯಾಗಿದೆ.

ಗ್ರೀನ್ ಜೋನ್ ಆಗಿದ್ದ ದಾಸರಹಳ್ಳಿ, ಚಿಕ್ಕಲಸಂದ್ರ, ಬೊಮ್ಮನಹಳ್ಳಿಯ ಹೆಚ್‍ಎಸ್‍ಆರ್ ಲೇಔಟ್, ಮಹದೇವಪುರದ ಕಾಡುಗೋಡಿ, ಕೆಂಪೇಗೌಡ ನಗರ, ಜಯಮಹಲ್, ಚೊಕ್ಕಸಂದ್ರ ಕಂಟೈನ್‍ಮೆಂಟ್ ಝೋನ್‍ಗಳ ಪಟ್ಟಿಗೆ ಹೊಸದಾಗಿ ಸೇರ್ಪಡೆಯಾಗಿವೆ.

ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲಿ ನಿಧಾನವಾಗಿ ಕೊರೋನ ಪಾಸಿಟಿವ್ ಕೇಸ್‍ಗಳು ಹೆಚ್ಚಾಗುತ್ತಿವೆ. ನಗರದಲ್ಲಿ ಕಳೆದ ಒಂದು ವಾರದಲ್ಲೇ 91 ಕೊರೋನ ಪ್ರಕರಣಗಳು ಪತ್ತೆಯಾಗಿದ್ದು, ಪಾದರಾಯನಪುರ, ಮಂಗಮ್ಮಪಾಳ್ಯ, ಡಿಜೆ ಹಳ್ಳಿ ವ್ಯಾಪ್ತಿಯಲ್ಲಿ ಅತೀ ಹೆಚ್ಚು ಕೊರೋನ ಪ್ರಕರಣಗಳು ವರದಿಯಾಗಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News