ಬೆಂಗಳೂರು: ಮಕ್ಕಳನ್ನು ಶಾಲೆಗೆ ಕಳುಹಿಸದಿರಲು ಸಹಿ ಸಂಗ್ರಹ ಅಭಿಯಾನ

Update: 2020-06-01 18:38 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.1: ಜುಲೈ 1ರಿಂದ ಶಾಲೆಗಳನ್ನು ಪುನಾರಂಭಿಸಲು ಸರಕಾರ ಚಿಂತನೆ ನಡೆಸುತ್ತಿದೆ. ಆದರೆ, ನಗರದ ಪೋಷಕರ ಸಂಘ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಕೊರೋನ ಪ್ರಕರಣ ಶೂನ್ಯವಾಗುವವರೆಗೂ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸದಿರಲು ಪೋಷಕರು ನಿರ್ಧರಿಸಿದ್ದಾರೆ. ಸರಕಾರದ ನಿರ್ಧಾರ ಸರಿಯಿಲ್ಲ, ಜುಲೈನಲ್ಲಿ ಶಾಲೆ ಆರಂಭಿಸುವದು ಕೆಟ್ಟ ಆಲೋಚನೆಯಾಗಿದೆ. ಇದು ಬೆಂಕಿ ಜೊತೆ ಸರಸವಾಡಿದಂತೆ, ಹೀಗಾಗಿ ನಾವು ನಮ್ಮ ಒಂದೇ ಒಂದು ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಪೋಷಕರು ತಿಳಿಸಿದ್ದಾರೆ. ಈ ಸಂಬಂಧ ಸಹಿ ಸಂಗ್ರಹ ಅಭಿಯಾನ ಆರಂಭಿಸಿದ್ದಾರೆ.

ಆನ್‍ಲೈನ್ ತರಗತಿಗಳ ಮೂಲಕ ಪೂರ್ಣ ಪ್ರಮಾಣದಲ್ಲಿ ತರಗತಿಗಳನ್ನು ನಡೆಸಲಿ ಎಂದು ಒತ್ತಾಯಿಸಿದ್ದು, ಸಹಿ ಸಂಗ್ರಹ ಅಭಿಯಾನಕ್ಕೆ ಸುಮಾರು 1,06,500 ಪೋಷಕರು ಸಹಿ ಮಾಡಿದ್ದಾರೆ.

ಇಂದಿನ ದಿನಗಳಲ್ಲಿ ಸಣ್ಣ ಮಕ್ಕಳನ್ನು ಹೊರಗೆ ಕಳುಹಿಸುವುದು ಸುರಕ್ಷಿತವಲ್ಲ, ತರಗತಿಗಳಿಗೆ ಮಕ್ಕಳನ್ನು ಕಳಿಸುವ ಬದಲು ಡಿಜಿಟಲ್ ವಾತಾವರಣದಲ್ಲಿ ಕಲಿಕೆಗೆ ಅವಕಾಶ ನೀಡುವುದು ಉತ್ತಮ ಎಂದು ಪೋಷಕರು ಅಭಿಪ್ರಾಯ ಪಟ್ಟಿದ್ದಾರೆ. ಮಕ್ಕಳಿಗೆ ಮನೆಯಲ್ಲೇ ಪಾಠ ಹೇಳಿಕೊಡುವುದು ಉತ್ತಮ ಎಂದು ಯುರೋ ಕಿಡ್ಸ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಜೋಧ್ ರಂಜನ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News