ದೇರಳಕಟ್ಟೆ: ಬಿಎಸ್ಸೆನ್ನೆಲ್ ಕಚೇರಿಯಲ್ಲಿ ಬೆಂಕಿ

Update: 2020-06-02 05:25 GMT

ಕೊಣಾಜೆ, ಜೂ.2: ದೇರಳಕಟ್ಟೆಯಲ್ಲಿರುವ ಬಿಎಸ್ಸೆನ್ನೆಲ್ ಜ್ಯೂನಿಯರ್ ಟೆಲಿಕಾಂ ಎಕ್ಸ್‌ಚೇಂಜ್ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಮಂಗಳವಾರ ಬೆಳಗ್ಗೆ 10 ಗಂಟೆ ವೇಳೆ ಕಚೇರಿ ತೆರೆದಾಗ ಅವಘಡ ಬೆಳಕಿಗೆ ಬಂದಿದೆ. ಕಚೇರಿಯೊಳಗಡೆ ಹೊಗೆ ಆವರಿಸಿಕೊಂಡಿತ್ತು. ಬಳಿಕ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ.

 ಬೆಂಕಿಯಿಂದ ಹಲವು ಉಪಕರಣಗಳಿಗೆ ಹಾನಿಯಾಗಿವೆ ಎಂದು ತಿಳಿದುಬಂದಿದೆ. ಘಟನೆಗೆ ಸ್ಪಷ್ಟ ಕಾರಣ ಇನ್ನಷ್ಟೇ ತಿಳಿದು ಬರಬೇಕಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News