ಅಕ್ರಮ ಮರಳು ಸಾಗಾಟ ಪ್ರಕರಣದ ತನಿಖೆಗೆ ಸಹಕಾರ: ಕುಯಿಲಾಡಿ

Update: 2020-06-02 13:59 GMT

ಉಡುಪಿ, ಜೂ.2: ಹಿರಿಯಡ್ಕ ಸ್ವರ್ಣ ನದಿಯ ಹೂಳೆತ್ತುವ ನೆಪದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡಲಾಗಿದೆ ಎಂಬ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಆರೋಪ ಸತ್ಯಕ್ಕೆ ದೂರವಾಗಿದೆ. ಇದರಲ್ಲಿ ಬಿಜೆಪಿ ಜನಪ್ರತಿನಿಧಿಗಳು ಭಾಗಿಯಾಗಿದ್ದರೆ ಯಾವುದೇ ಒತ್ತಡ ಹಾಕದೆ ತನಿಖೆಗೆ ಪೂರ್ಣ ಸಹಕಾರ ನೀಡಲಾಗುವುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಕಡಿಯಾಳಿಯಲ್ಲಿರುವ ಪಕ್ಷದ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ಜಿಲ್ಲಾ ಬಿಜೆಪಿಯ ವಿವಿಧ ಪ್ರಕೋಷ್ಠ, ಮೋರ್ಚಾ, ಮಂಡಲಕ್ಕೆ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು, ಒಂದೆರಡು ದಿನಗಳಲ್ಲಿ ಇದರ ಪಟ್ಟಿ ಬಿಡುಗಡೆ ಮಾಡಲಾಗುವುದು. ಈ ಮೂಲಕ ಮುಂದಿನ ಗ್ರಾಪಂ ಹಾಗೂ ಜಿಪಂಗಳಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿ ಯಲು ಬೇಕಾದ ಎಲ್ಲಾ ರೀತಿಯ ಕ್ರಮಗಳೊಂದಿಗೆ ಪಕ್ಷ ಸಂಘಟನೆಗೆ ಮಾಡ ಲಾಗುವುದು ಎಂದರು.

ಕೊರೋನ ಲಾಕ್‌ಡೌನ್ ನಂತರ ಭಾರತವನ್ನು ಸ್ವಾವಲಂಬಿಯಾಗಿಸುವ ಉದ್ದೇಶದಿಂದ ವಿದೇಶಿ ವಸ್ತುಗಳನ್ನು ಬಹಿಷ್ಕರಿಸಿ, ಭಾರತದ ಸ್ವದೇಶಿ ವಸ್ತುಗಳನ್ನು ಖರೀದಿಸುವಂತೆ ಸಾಮಾಜಿಕ ಜಾಲತಾಣದಲ್ಲಿ ಕರೆ ಕೊಟ್ಟಿದ್ದೇವೆ. ಈ ಮೂಲಕ ಜನಜಾಗೃತಿಯೊಂದಿಗೆ ಸ್ವದೇಶಿ ವಸ್ತುಗಳ ಖರೀದಿಗೆ ಉತ್ತೇಜನ ನೀಡಲಾಗು ವುದು ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮನೋಹರ್ ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News