ಮಹಿಳಾ ಅಭಿವೃಧ್ದಿ ನಿಗಮದಿಂದ ಮಹಿಳೆಯರಿಗೆ ಸಾಲ ಯೋಜನೆ

Update: 2020-06-02 14:02 GMT

ಉಡುಪಿ, ಜೂ.2: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಹಿಳೆಯರು ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಉದ್ಯೋಗಿನಿ ಯೋಜನೆಯ ಮೂಲಕ ರಾಷ್ಟ್ರೀಕೃತ ಬ್ಯಾಂಕಿನಿಂದ ಸಾಲ ಮಂಜೂರಾದಲ್ಲಿ ನಿಗಮದಿಂದ ಸಹಾಯಧನ, ಬೀದಿ ಬದಿ ಮಹಿಳಾ ವ್ಯಾಪಾರಿಗಳಿಗೆ ಸಮೃದ್ಧಿ ಯೋಜನೆಯಡಿ ಪ್ರೋತ್ಸಾಹಧನ, ದಮನಿತ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಚೇತನಾ ಯೋಜನೆಯಡಿ ಬಡ್ಡಿ ರಹಿತ ಸಾಲ ಮತ್ತು ಸಹಾಯಧನ ಹಾಗೂ ಇಲಾಖೆಯ ಸ್ತ್ರೀಶಕ್ತಿ ಗುಂಪುಗಳಿಗೆ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಬಡ್ಡಿ ರಹಿತ ಸಾಲವನ್ನು ಕಿರುಸಾಲ ಯೋಜನೆಯಡಿ ನೀಡಲಾಗುವುದು.

ಈ ಬಗ್ಗೆ ಅರ್ಜಿಗಳನ್ನು ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಪಡೆದು ಭರ್ತಿ ಮಾಡಿ ಜೂನ್ 26ರೊಳಗೆ ಸಲ್ಲಿಸ ಬೇಕು. ಹೆಚ್ಚಿನ ಮಾಹಿತಿಗಳಿಗೆ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ ಮಣಿಪಾಲ, ದೂರವಾಣಿ ಸಂಖ್ಯೆ: 0820-2574978ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News