ಉಡುಪಿ ಜಿಲ್ಲೆಯಾದ್ಯಂತ ಭಾರೀ ಗಾಳಿಮಳೆ: ಮೆಸ್ಕಾಂಗೆ 5ಲಕ್ಷ ರೂ. ನಷ್ಟ

Update: 2020-06-02 17:22 GMT

ಉಡುಪಿ, ಜೂ.2: ಉಡುಪಿ ಜಿಲ್ಲೆಯಾದ್ಯಂತ ಕಳೆದ ರಾತ್ರಿಯಿಂದ ಸುರಿ ಯುತ್ತಿರುವ ಭಾರೀ ಗಾಳಿಮಳೆಯಿಂದ ಮೆಸ್ಕಾಂಗೆ ಲಕ್ಷಾಂತರ ರೂ. ನಷ್ಟ ಉಂಟಾಗಿರುವ ಬಗ್ಗೆ ವರದಿಯಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಉಡುಪಿ ತಾಲೂಕಿನಲ್ಲಿ 22.7 ಮೀ.ಮೀ., ಕುಂದಾಪುರ ತಾಲೂಕಿನಲ್ಲಿ 22.6 ಮೀ.ಮೀ., ಕಾರ್ಕಳ ತಾಲೂಕಿನಲ್ಲಿ 23.4 ಮೀ.ಮೀ. ಹಾಗೂ ಜಿಲ್ಲೆಯಲ್ಲಿ ಸರಾಸರಿ 22.9 ಮೀ.ಮೀ. ಮಳೆಯಾಗಿದೆ. 

ಜಿಲ್ಲೆಯಲ್ಲಿ ಮೆಸ್ಕಾಂಗೆ ಸಂಬಂಧಿಸಿದ 9 ಟ್ರಾನ್ಸ್‌ಫಾರ್ಮರ್ ಮತ್ತು 30 ವಿದ್ಯುತ್ ಕಂಬಗಳು ಗಾಳಿಮಳೆಗೆ ಧರೆಗೆ ಉರುಳಿ ಬಿದ್ದಿದ್ದು, ಇದರಿಂದ ಮೆಸ್ಕಾಂಗೆ ಸುಮಾರು 5ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಾಪು ತಾಲೂಕಿನ ಪಲಿಮಾರು ಗ್ರಾಮದ ಅಪ್ಪಿ ಪೂಜಾರ್ತಿ ಎಂಬವರ ಮನೆಯ ಮೇಲೆ ತೆಂಗಿನ ಮರ ಬಿದ್ದು ಅಪಾರ ಹಾನಿ ಸಂಭವಿಸಿದೆ. ಕಳತ್ತೂರು ಗ್ರಾಮದ ಸೂರ್ಯನಗರದ ಬೇಬಿ ಕೊರಗ ಎಂಬವರ ಮನೆಯ ಮೇಲೆ ಮರ ಬಿದ್ದು ಸುಮಾರು 15ಸಾವಿರ ರೂ. ನಷ್ಟ ಉಂಟಾಗಿದೆ ಎಂದು ತಾಲೂಕು ಕಚೇರಿ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News