ಬೆಂಗಳೂರು: ಜೆಜೆ ನಗರ ಪೊಲೀಸ್ ಠಾಣೆ ಸೀಲ್ ಡೌನ್ ಸಾಧ್ಯತೆ

Update: 2020-06-02 17:30 GMT

ಬೆಂಗಳೂರು, ಜೂ.2: ಪೊಲೀಸ್ ಸಿಬ್ಬಂದಿಯೊರ್ವರಿಗೆ ಕೊರೋನ ಸೋಂಕು ದೃಢಪಟ್ಟಿರುವ ಹಿನ್ನೆಲೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಆದೇಶಿಸಿದರೆ ಜೆಜೆ ನಗರ ಪೊಲೀಸ್ ಠಾಣೆಯನ್ನು ಸೀಲ್‍ಡೌನ್ ಮಾಡಲು ಆರೋಗ್ಯಾಧಿಕಾರಿಗಳು ಹಾಗೂ ಬಿಬಿಎಂಪಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.

ಜೆಜೆ ನಗರ ಪೊಲೀಸ್ ಠಾಣೆಯ ಹೆಡ್ ಕಾನ್‍ಸ್ಟೇಬಲ್‍ಗೆ, ಸೋಂಕು ಪ್ರಮಾಣ ಹೆಚ್ಚಾಗಿರುವ ಸೂಕ್ಷ್ಮ ಪ್ರದೇಶದಲ್ಲಿ ಸಂಚಾರ ಮಾಡಿರುವ ಕಾರಣದಿಂದಾಗಿ, ಕೊರೋನ ಸೋಂಕು ತಗಲಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಅದೇ ರೀತಿ, ಇತರೆ ಪೊಲೀಸ್ ಸಿಬ್ಬಂದಿಯನ್ನು ಸಹ ಪರೀಕ್ಷೆಗೆ ಒಳಪಡಿಸಲಾಗಿದೆ.

ಹೊಸ ಮಾರ್ಗಸೂಚಿ: ಪದೇ ಪದೇ ಕೊರೋನ ಪ್ರಕರಣಗಳು ಕಾಣಿಸಿಕೊಂಡ ಹಿನ್ನೆಲೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮಾರ್ಗಸೂಚಿ ಹೊರಡಿಸಲಿದ್ದಾರೆ. ಅದೇ ರೀತಿ, ಜೆ.ಜೆ. ನಗರ ಪೊಲೀಸ್ ಠಾಣೆಯ ಬಗ್ಗೆ ಪಶ್ಚಿಮ ವಿಭಾಗ ಡಿಸಿಪಿ ರಮೇಶ್ ಬಾನೋತ್ ಹಾಗೂ ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ಅವರು ಪರಿಶೀಲನೆ ನಡೆಸಿ ಡಿಜಿ ಅವರಿಗೆ ರಿಪೋರ್ಟ್ ನೀಡಲಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News