ಐಎನ್‌ಎಕ್ಸ್ ಮೀಡಿಯಾ ಪ್ರಕರಣ: ಚಿದಂಬರಂ, ಪುತ್ರ ಕಾರ್ತಿ ವಿರುದ್ಧ ಚಾರ್ಚ್‌ಶೀಟ್

Update: 2020-06-03 05:40 GMT

ಹೊಸದಿಲ್ಲಿ, ಜೂ.3: ಐಎನ್‌ಎಕ್ಸ್ ಮೀಡಿಯಾ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ಚಿದಂಬರಂ ವಿರುದ್ಧ ಚಾರ್ಚ್‌ಶೀಟ್ ಸಲ್ಲಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಮೂಲಗಳು ತಿಳಿಸಿವೆ.

ಐಎನ್‌ಎಕ್ಸ್ ಮೀಡಿಯಾ ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನು ಜಾರಿ ನಿರ್ದೇಶನಾಲಯ(ಈಡಿ)ನಿಭಾಯಿಸುತ್ತಿದೆ.

ಈ ಹಿಂದೆ ಕೇಂದ್ರ ತನಿಖಾ ಸಂಸ್ಥೆ(ಸಿಬಿಐ) ಚಿದಂಬರಂ ಹಾಗೂ ಇತರರ ವಿರುದ್ಧ ಐಎನ್‌ಎಕ್ಸ್ ಮೀಡಿಯಾಕ್ಕೆ ವಿದೇಶಿ ಬಂಡವಾಳ ಹರಿದುಬರಲು ಸುಮಾರು 10 ಲಕ್ಷ ರೂ. ಸ್ವೀಕರಿಸಿದ್ದಾರೆಂಬ ಕುರಿತು ತನಿಖೆ ನಡೆಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News