ಮುಂಬೈನ 4 ಪ್ರಮುಖ ಖಾಸಗಿ ಆಸ್ಪತ್ರೆಗಳಿಗೆ ಶೋಕಾಸ್ ನೋಟಿಸ್: ಆರೋಗ್ಯ ಸಚಿವ ರಾಜೇಶ್

Update: 2020-06-03 06:12 GMT

ಮುಂಬೈ, ಜೂ.3: "ಕೋವಿಡ್-19 ರೋಗಿಗಳ ಚಿಕಿತ್ಸೆಗೆ ಸಂಬಂಧಿಸಿ ಸರಕಾರ ನೀಡಿರುವ ನಿಯಮವನ್ನು ಉಲ್ಲಂಘಿಸಿರುವ ನಗರದ ನಾಲ್ಕು ಪ್ರಸಿದ್ಧ ಖಾಸಗಿ ಆಸ್ಪತ್ರೆಗಳಿಗೆ ಶೋಕಾಸ್ ನೋಟಸ್‌ಗಳನ್ನು ನೀಡಲಾಗಿದೆ. ನಿಯಮ ಉಲ್ಲಂಘಿಸಿರುವ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು'' ಎಂದು ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್ ಟೋಫೆ ಇಂದು ಎಚ್ಚರಿಕೆ ನೀಡಿದ್ದಾರೆ.

"ಕೋವಿಡ್-19 ರೋಗಿಗಳ ಚಿಕಿತ್ಸೆಗೆ ಸಂಬಂಧಿಸಿ ನಿಯಮಗಳನ್ನು ಪಾಲಿಸದ ಬಾಂಬೆ, ಜಸ್ಲೋಕ್, ಹಿಂದೂಜಾ ಹಾಗೂ ಲೀಲಾವತಿ ಆಸ್ಪತ್ರೆಗಳಿಗೆ ನೋಟಿಸ್ ನೀಡಲಾಗಿದೆ. ಕೋವಿಡ್-19 ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಖಾಸಗಿ ಆಸ್ಪತ್ರೆಗಳ ಶೇ.80ರಷ್ಟುಹಾಸಿಗೆಯನ್ನು ವಹಿಸಿಕೊಂಡ ಬಳಿಕ ಕೆಲವು ಖಾಸಗಿ ಆಸ್ಪತ್ರೆಗಳು ಕೋವಿಡ್-19 ರೋಗಿಗಳಿಗೆ ಸಹಕಾರ ನೀಡುತ್ತಿಲ್ಲ. ಕೆಲವು ಆಸ್ಪತ್ರೆಗಳು ರೋಗಿಗಳಿಗೆ ಹಾಸಿಗೆಗಳನ್ನು ನೀಡಲು ನಿರಾಕರಿಸುತ್ತಿವೆ. ಬೆಡ್‌ಗಳು ಖಾಲಿ ಇಲ್ಲ ಎಂದು ಹೇಳುತ್ತಿವೆ ಎಂಬ ದೂರುಗಳು ಕೇಳಿಬಂದಿದ್ದು ನಾನು ಈ ನಾಲ್ಕು ಆಸ್ಪತ್ರೆಗಳಿಗೆ ಸೋಮವಾರ ರಾತ್ರಿ ಭೇಟಿ ನೀಡಿ ಪರಿಶೀಲಿಸಿದ್ದೇನೆ'' ಎಂದು ರಾಜೇಶ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News