ದಕ್ಷಿಣ ಭಾರತದಲ್ಲೇ ಏಕೈಕ ಕೊರೋನ ಮುಕ್ತ ಜಿಲ್ಲೆ ನಮ್ಮ ರಾಜ್ಯದಲ್ಲಿ !

Update: 2020-06-03 16:10 GMT
ಸಾಂದರ್ಭಿಕ ಚಿತ್ರ

ಚಾಮರಾಜನಗರ, ಜೂ.3: ಇದುವರೆಗೆ ಒಂದೇ ಒಂದು ಕೊರೋನ ವೈರಸ್ ಪ್ರಕರಣ ಇಲ್ಲದೇ ರಾಜ್ಯದ ಗಮನ ಸೆಳೆದಿದ್ದ ರಾಜ್ಯದ ಗಡಿ ಜಿಲ್ಲೆ ಚಾಮರಾಜನಗರ ಇದೀಗ ದಕ್ಷಿಣ ಭಾರತದಲ್ಲಿಯೇ ಏಕೈಕ ಕೊರೋನ ಮುಕ್ತ ಜಿಲ್ಲೆ ಎಂಬ ಹೆಗ್ಗಳಿಕೆ ಪಾತ್ರವಾಗಿದೆ.

Covid19india.org ನೀಡಿರುವ ಅಧಿಕೃತ ಅಂಕಿ ಅಂಶಗಳಿಂದ ಈ ಮಾಹಿತಿ ದೊರೆತಿದ್ದು, ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ ಹಾಗೂ ಕೇರಳ ರಾಜ್ಯಗಳ ನಡುವೆ ಹಸಿರು ವಲಯವಾಗಿ ಕೊರೋನ ಮುಕ್ತ ಜಿಲ್ಲೆಯಾಗಿಯೇ ಉಳಿದಿರುವುದು ಚಾಮರಾಜನಗರ ಎಂಬುದು ಗಮನಾರ್ಹ ಸಂಗತಿ.

ಇದುವರೆಗೆ ತೆಲಂಗಾಣದ ವಾರಂಗಲ್ ಗ್ರಾಮೀಣ ಹಾಗೂ ಕರ್ನಾಟಕದ ಚಾಮರಾಜನಗರ ಜಿಲ್ಲೆಗಳಲ್ಲಿ ಮಾತ್ರ ಕೊರೋನ ಕಂಡುಬಂದಿರಲಿಲ್ಲ. ಆದರೆ, ತೆಲಂಗಾಣದ ವಾರಂಗಲ್ ಗ್ರಾಮೀಣ ಜಿಲ್ಲೆಯಲ್ಲಿ ಮಂಗಳವಾರ ಕೊರೋನ ಸೋಂಕು ಪ್ರಕರಣ ಪತ್ತೆಯಾಗಿದೆ. ಹೀಗಾಗಿ ಚಾಮರಾಜನಗರ ದಕ್ಷಿಣ ಭಾರತದ ಏಕೈಕ ಕೊರೋನ ಮುಕ್ತ ಏಕೈಕ ಜಿಲ್ಲೆ ಎಂಬ ಹಿರಿಮೆಗೆ ಪಾತ್ರವಾಗಿದೆ.

ಚಾಮರಾಜನಗರ ಜಿಲ್ಲಾಡಳಿತ ಕೈಗೊಂಡ ನಿರ್ಧಾರ ಮತ್ತು ಕ್ರಮಗಳಿಗೆ ಜಿಲ್ಲೆಯ ಜನತೆ ಸ್ಪಂದಿಸಿದ ರೀತಿ ಈ ಹೆಗ್ಗಳಿಕೆಗೆ ಕಾರಣವಾಗಿದೆ. ಇದಕ್ಕೆಲ್ಲಾ ಶ್ರಮಿಸಿದ ಜಿಲ್ಲೆಯ ಎಲ್ಲಾ ವರ್ಗದ ಅಧಿಕಾರಿಗಳು ಆರೋಗ್ಯ ಇಲಾಖೆಯ ಸಿಬ್ಬಂದಿ ಅದರಲ್ಲೂ ಆಶಾ ಕಾರ್ಯಕರ್ತೆಯರ ಸೇವೆ ಮತ್ತು ಕೊರೋನ ವಾರಿಯರ್ಸ್ ‌ಗಳ ಶ್ರಮ ಮಹತ್ತರವಾದುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News