ಕೊರೋನ ಹರಡುವ ಭೀತಿ: ಪೋಷಕರಿಂದ 'ನೋ ಸ್ಕೂಲ್' ಅಭಿಯಾನ

Update: 2020-06-03 17:12 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.3: ಕೊರೋನ ಸೋಂಕು ಹರಡುವ ಭೀತಿಯಿಂದ ತಮ್ಮ ಮಕ್ಕಳನ್ನು ಈಗಲೇ ಕಳುಹಿಸುವುದಿಲ್ಲ ಎಂದು ಪೋಷಕರು 'ನೋ ಸ್ಕೂಲ್' ಅಭಿಯಾನ ಆರಂಭಿಸಿದ್ದಾರೆ.

ಐದನೇ ಹಂತದ ಲಾಕ್‍ಡೌನ್‍ನಲ್ಲಿ ಬಹುತೇಕ ಲಾಕ್‍ಡೌನ್ ಸಡಿಲಿಕೆಯಾಗಿರುವುದರಿಂದ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳನ್ನು ಆರಂಭಿಸುವ ಬಗ್ಗೆ ಸರಕಾರ ಚಿಂತನೆ ನಡೆಸುತ್ತಿರುವುದು ಒಂದೆಡೆಯಾದರೆ ಮತ್ತೊಂದೆಡೆ ಪೋಷಕರು ನಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ, ನಮಗೆ ಮಕ್ಕಳ ಶಿಕ್ಷಣಕ್ಕಿಂತ ಅವರ ಆರೋಗ್ಯ ಮುಖ್ಯ ಎಂದು 'ನೋ ಸ್ಕೂಲ್' ಅಭಿಯಾನವನ್ನು ಪ್ರಾರಂಭಿಸಿದ್ದಾರೆ.

ಕೇಂದ್ರದ ಗೃಹಮಂತ್ರಾಲಯವು ಶಾಲೆಗಳನ್ನು ತೆರೆಯಲು ಆಯಾ ರಾಜ್ಯಕ್ಕೆ ಅನುಮತಿ ನೀಡಿದೆ. ಪೋಷಕರಿಂದ ಅಭಿಪ್ರಾಯ ಸಂಗ್ರಹಿಸಿ ನಂತರ ಶಾಲೆಗಳನ್ನ ಆರಂಭಿಸುವಂತೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಇತ್ತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಶಾಲೆಗಳನ್ನು ಆರಂಭಿಸುವ ಬಗ್ಗೆ ಪೋಷಕರಿಂದ ಅಭಿಪ್ರಾಯ ಕೇಳಿದ್ದಾರೆ. ನೋ ಸ್ಕೂಲ್ ಅಭಿಯಾನದಡಿ ಪೋಷಕರಿಂದ ಒಮ್ಮತದಿಂದ ಕೊರೋನ ಕಾಟ ಮುಗಿಯುವವರೆಗೂ ಶಾಲೆಗಳನ್ನು ತೆರೆಯಬಾರದು ಎಂಬ ತೀರ್ಮಾನಕ್ಕೆ ಬಂದರೆ ಇನ್ನೂ ಮೂರು-ನಾಲ್ಕು ತಿಂಗಳು ಅಂಗನವಾಡಿಗಳು, 1 ರಿಂದ 9ನೇ ತರಗತಿಯವರೆಗಿನ ಶಾಲೆಗಳು ಬಂದ್ ಆಗಲಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News